HEALTH TIPS

ಭಾರತದಲ್ಲಿ ಕೊರೋನಾ ಮತ್ತಷ್ಟು ಏರಿಕೆ: ದೇಶದಲ್ಲಿಂದು 8,329 ಹೊಸ ಕೇಸ್ ಪತ್ತೆ, 40 ಸಾವಿರ ದಾಟಿದ ಸಕ್ರಿಯ ಪ್ರಕರಣ

     ನವದೆಹಲಿ: 4ನೇ ಅಲೆ ಭೀತಿಯ ನಡುವೆ ದೇಶದಲ್ಲಿ ಕೋವಿಡ್ ಆರ್ಭಟ ಮತ್ತಷ್ಟು ಹೆಚ್ಚಾಗಿದ್ದು, ಶನಿವಾರ ಮುಂಜಾಬನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ 8,329 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ.

     ಹಲವು ದಿನಗಳ ಬಳಿಕ ದೇಶದಲ್ಲಿ 8 ಸಾವಿರಕ್ಕೂ ಹೆಚ್ಚು ದೈನಂದಿನ ಕೊರೋನಾ ಪ್ರಕರಣಗಳು ದಾಖಲಾಗಿದ್ದು, ಒಂದೇ ದಿನದಲ್ಲಿ ಶೇ.2.41ರಷ್ಟು ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ.

     ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ  4,32,13,435ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ  5,24,757ಕ್ಕೆ ಏರಿಕೆಯಾಗಿದೆ.

      ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 40,370ಕ್ಕೆ ಇಳಿಕೆಯಾಗಿದೆ.

      ಈ ನಡುವೆ ಕಳೆದ 24 ಗಂಟೆಗಳಲ್ಲಿ 4,216 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ  4,26,48,308ಕ್ಕೆ ತಲುಪಿದೆ.

       ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,35,050 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದರೊಂದಿಗೆ ಈ ವರೆಗೂ 85,41,98,288 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

     ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

      ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,94,76,42,992 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.‌

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries