ಶಿಮ್ಲಾ: ಹಿಮಾಚಲ ಪ್ರದೇಶದ ಪರ್ವಾನೂ ಬಳಿ ತಾಂತ್ರಿಕ ದೋಷದಿಂದ ಕೇಬಲ್ ಕಾರ್ ಸ್ಥಗಿತಗೊಂಡಿದ್ದು, ಅದರಲ್ಲಿ 8 ಮಂದಿ ಪ್ರವಾಸಿಗರು ಸಿಲುಕಿದ್ದಾರೆ ಎಂದು ಪೊಲೀಸರು ತಿಳಿಸಿರುವುದಾಗಿ ಎಎನ್‌ಐ ಟ್ವೀಟ್ ಮಾಡಿದೆ.
ಶಿಮ್ಲಾ: ಹಿಮಾಚಲ ಪ್ರದೇಶದ ಪರ್ವಾನೂ ಬಳಿ ತಾಂತ್ರಿಕ ದೋಷದಿಂದ ಕೇಬಲ್ ಕಾರ್ ಸ್ಥಗಿತಗೊಂಡಿದ್ದು, ಅದರಲ್ಲಿ 8 ಮಂದಿ ಪ್ರವಾಸಿಗರು ಸಿಲುಕಿದ್ದಾರೆ ಎಂದು ಪೊಲೀಸರು ತಿಳಿಸಿರುವುದಾಗಿ ಎಎನ್‌ಐ ಟ್ವೀಟ್ ಮಾಡಿದೆ.
ಸೋಲನ್ ಜಿಲ್ಲೆಯ ಚಂಡೀಗಢ-ಶಿಮ್ಲಾ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಟಿಂಬರ್ ಟ್ರಯಲ್ ರೆಸಾರ್ಟ್‌ಗೆ ಸೇರಿದ ಕೇಬಲ್ ಕಾರ್ ಒಂದು ಗಂಟೆಗೂ ಹೆಚ್ಚು ಸಮಯದಿಂದ ಸಿಲುಕಿಕೊಂಡಿದೆ.
ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಮತ್ತು ಪ್ರವಾಸಿಗರನ್ನು ರಕ್ಷಿಸಲು ಸೇನೆಯನ್ನು ಕರೆಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಐಎಎನ್‌ಎಸ್‌ಗೆ ತಿಳಿಸಿದ್ದಾರೆ.
ಕೇಬಲ್ ಕಾರಿನಲ್ಲಿ ಸಿಲುಕಿರುವ ಪ್ರವಾಸಿಗರು ವಿಡಿಯೊಗಳನ್ನು ತಮ್ಮ ಕುಟುಂಬ ಸದಸ್ಯರೊಂದಿಗೆ ಹಂಚಿಕೊಂಡಿದ್ದಾರೆ. ಇಬ್ಬರು ಪ್ರವಾಸಿಗರನ್ನು ಹಗ್ಗದ ಮೂಲಕ ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಶಾಸಕ ಧನಿ ರಾಮ್ ಶಾಂಡಿಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.