ಕಾಸರಗೋಡು: ಎಂಡೋಸಲ್ಫಾನ್ ಸಂತ್ರಸ್ತರಿಗೆ ಸರ್ಕಾರ ಮಂಜೂರು ಮಾಡಿರುವ 200 ಕೋಟಿ ರೂ.ಗಳನ್ನು ಸುಪ್ರೀಂ ಕೋರ್ಟ್ ಆದೇಶದಂತೆ ಅರ್ಜಿದಾರರಿಗೆ ಪಾವತಿಸಲಾಗುತ್ತಿದ್ದು, ವಿಳಂಬ ತಪ್ಪಿಸಲು ಮತ್ತು ಆರ್ಥಿಕ ನೆರವು ನೀಡಲು ಆನ್‍ಲೈನ್ ವೆಬ್ ಪೋರ್ಟಲ್ ಮೂಲಕ ಮಾತ್ರ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ. ಸಂತ್ರಸ್ತರಿಗೆ ಯಾವುದೇ ತೊಂದರೆಯಾಗದಂತೆ ಪಾರದರ್ಶಕವಾಗಿ ವಿತರಿಸಲಾಗುವುದು. ಸುಪ್ರೀಂ ಕೋರ್ಟ್ ಆದೇಶದಂತೆ ಈಗಾಗಲೇ 458 ಸಂತ್ರಸ್ತರಿಗೆ ಪರಿಹಾರ ನೀಡಲಾಗಿದೆ. ಆನ್‍ಲೈನ್ ವ್ಯವಸ್ಥೆ ಜಾರಿಗೆ ಬರುವ ಮುನ್ನ ಜಿಲ್ಲಾಧಿಕಾರಿ ಕಚೇರಿಗೆ ನೇರವಾಗಿ ಸಲ್ಲಿಸಿದ್ದ 200 ಮಂದಿಯ ಅರ್ಜಿಗಳನ್ನು ಜಿಲ್ಲಾಧಿಕಾರಿ ಕಚೇರಿಯಿಂದಲೇ ಆನ್‍ಲೈನ್ ಮೂಲಕ ವರ್ಗಾಯಿಸಲಾಗುತ್ತಿದೆ ಎ0ದು ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರ್ ಚಂದ್ ತಿಳಿಇಸದ್ದಾರೆ.
ನಿಗದಿತ ನಮೂನೆಯಲ್ಲಿ ನೇರವಾಗಿ ಕಲೆಕ್ಟರೇಟ್‍ಗೆ ಅರ್ಜಿ ಸಲ್ಲಿಸಿದ ಸಂತ್ರಸ್ತರು ಮತ್ತೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕಾಗಿಲ್ಲ. ಆನ್‍ಲೈನ್ ವ್ಯವಸ್ಥೆ ಜಾರಿಗೆ ಬರುವ ಮುನ್ನ ಜಿಲ್ಲಾಧಿಕಾರಿ ಕಚೇರಿಗೆ ನೇರವಾಗಿ ಅರ್ಜಿ ಸಲ್ಲಿಸಿದ ನೂರಾರು ಜನರಿಗೆ ಪರಿಹಾರ ನೀಡಲಾಗಿದೆ ಎಂದರು .
ಎಂಡೋಸಲ್ಫಾನ್ ಸಂತ್ರಸ್ತರಿಗೆ ಈ ಹಿಂದೆ ಅರ್ಜಿ ಸಲ್ಲಿಸದ ಹಾಗೂ ಆರ್ಥಿಕ ಸಹಾಯಕ್ಕೆ ಅರ್ಹರಾಗಿರುವ ಸಂಕಷ್ಟದಲ್ಲಿರುವ ಸಂತ್ರಸ್ತರು ಆನ್ ಲೈನ್ ನಲ್ಲಿ ಸಾಕಷ್ಟು ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿದರೆ ಆದಷ್ಟು ಬೇಗ ನಿಗದಿತ ಆರ್ಥಿಕ ನೆರವು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
3718 ಜನರಿಗೆ ಆರ್ಥಿಕ ನೆರವು ನೀಡಲು ಉಳಿದಿದೆ. ಈ ಪೈಕಿ 458 ಮಂಜೂರಾಗಿದೆ. 3260 ಸಂತ್ರಸ್ತರಿಗೆ ಹಣ ನೀಡಲು ಬಾಕಿ ಇದೆ. ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ 5 ಲಕ್ಷ ಪಾವತಿಸುವ ಮೊದಲು ವಿವಿಧ ವರ್ಗಗಳಲ್ಲಿ 3 ಲಕ್ಷ ರೂಪಾಯಿಗಳ ಆರ್ಥಿಕ ನೆರವು ಪಡೆದವರು ಇದರಲ್ಲಿ ಸೇರಿದ್ದಾರೆ. ಅವರಿಗೆ ಉಳಿದ 5 ಲಕ್ಷ ರೂ. ನೀಡಲಾಗುವುದು. ಎಲ್ಲಾ ಅರ್ಹ ಸಂತ್ರಸ್ತರಿಗೆ ಸಕಾಲದಲ್ಲಿ ಪರಿಹಾರ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಎಂಡೋಸಲ್ಫಾನ್ ಪುನರ್ವಸತಿ ಗ್ರಾಮ:
ಮೊದಲ ಹಂತ ಒಂದು ವರ್ಷದೊಳಗೆ
ಎಂಡೋಸಲ್ಫಾನ್ ಪುನರ್ವಸತಿ ಗ್ರಾಮದ ಮೊದಲ ಹಂತವನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ಕಾರ್ಯನಿರ್ವಾಹಕ ಅಧಿಕಾರಿ ಜಿಲ್ಲಾ ಸಾಮಾಜಿಕ ನ್ಯಾಯ ಅಧಿಕಾರಿಯಾಗಿದ್ದಾರೆ. ಯೋಜನೆಗೆ 4,89,52,829 ರೂ.ಗಳ ಆಡಳಿತಾತ್ಮಕ ಮಂಜೂರಾತಿ ದೊರೆತಿದೆ. 4, 45,00,000 ರೂ.ಗಳ ಆಡಳಿತಾತ್ಮಕ ಮಂಜೂರಾತಿ ದೊರೆತಿದೆ. ಗುತ್ತಿಗೆ ಮೊತ್ತ 4,17,06,933 ರೂ. ಒಪ್ಪಂದವು ಮೇ 24, 2023 ರೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ವಡಗÀರ ಉರಾಳುಂಗಲ್ ಕಾರ್ಮಿಕ ಗುತ್ತಿಗೆ ಸಹಕಾರಿ ಸಂಘಕ್ಕೆ ಗುತ್ತಿಗೆ ನೀಡಲಾಗಿದೆ.