ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರಿಗೆ ಕೇಂದ್ರ ಸರ್ಕಾರ ಬುಧವಾರದಿಂದ ಅನ್ವಯವಾಗುವಂತೆ ಝಡ್ ಪ್ಲಸ್ ಶ್ರೇಣಿಯ ಭದ್ರತೆ ಒದಗಿಸಿದೆ ಎಂದು ವರದಿಯಾಗಿದೆ.
ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರಿಗೆ ಕೇಂದ್ರ ಸರ್ಕಾರ ಬುಧವಾರದಿಂದ ಅನ್ವಯವಾಗುವಂತೆ ಝಡ್ ಪ್ಲಸ್ ಶ್ರೇಣಿಯ ಭದ್ರತೆ ಒದಗಿಸಿದೆ ಎಂದು ವರದಿಯಾಗಿದೆ.
ಜಾರ್ಖಂಡ್‌ನ ರಾಜ್ಯಪಾಲರಾಗಿದ್ದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯನ್ನಾಗಿ ಬಿಜೆಪಿ ಮಂಗಳವಾರ ಘೋಷಿಸಿತ್ತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಮುರ್ಮು ಅವರನ್ನು ಆಯ್ಕೆ ಮಾಡಲಾಗಿತ್ತು.
ಇದಕ್ಕೂ ಮುನ್ನ, ಪ್ರತಿಪಕ್ಷಗಳು ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ಅವರನ್ನು ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಘೋಷಿಸಿದ್ದವು.