ಬದಿಯಡ್ಕ: ಕಾಸರಗೋಡು ಕನ್ನಡ ಹೋರಾಟ ಸಮಿತಿಯ ಆಶ್ರಯದಲ್ಲಿ ಇಂದು(ಜೂ.5) ಬೆಳಿಗ್ಗೆ 10 ರಿಂದ ಶ್ರೀಮದ್ ಎಡನೀರು ಮಠದ ಸಭಾಂಗಣದಲ್ಲಿ ಕಾಸರಗೋಡಿನ ಕನ್ನಡ ಭಾಷಿಕರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಶ್ರೀಮದ್ ಎಡನೀರು ಮಠಾಧೀಶ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ವಿಶೇಷ ಸಭೆ ಆಯೋಜಿಸಲಾಗಿದೆ.
ಕಾಸರಗೋಡಿನ ಜ್ವಲಂತ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಸಮಗ್ರ ಚರ್ಚೆ ನಡೆಯಲಿದ್ದು, ರಾಜ್ಯ ಸರ್ಕಾರ ಅನುಸರಿಸುತ್ತಿರುವ ಮಲತಾಯಿ ಧೋರಣೆಗಳು, ಕಚೇರಿ ಕಾರ್ಯಕಲಾಪಗಳಲ್ಲಿ ಕನ್ನಡಿಗರಿಗಾಗುವ ಅನ್ಯಾಯಗಳ ಬಗ್ಗೆ ಅನುಸರಿಸಬೇಕಾದ ಕಾರ್ಯಚಟುವಟಿಕೆಗಳ ಬಗ್ಗೆ ಸಭೆಯಲ್ಲಿ ನೀರ್ಣಯ ಕೈಗೊಳ್ಳಲಾಗುವುದು. ಜಿಲ್ಲೆಯ ಎಲ್ಲಾ ಕನ್ನಡ ಪರ ಸಂಘಸಂಸ್ಥೆಗಳ ಪದಾಧಿಕಾರಿಗಳು, ಶಾಲಾ ಕಾಲೇಜುಗಳ ಪ್ರತಿನಿಧಿಗಳು ಹಾಗೂ ಕನ್ನಡ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕನ್ನಡ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಭಾಸ್ಕರ ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.