ಕಾಸರಗೋಡು: ಕನ್ನಡ ಹೋರಾಟ ಸಮಿತಿ ಸಭೆಯು ಇಂದು(ಜೂ.18) ಮಧ್ಯಾಹ್ನ 3ಕ್ಕೆ ಕಾಸರಗೋಡು ಬ್ಯಾಂಕ್ ರಸ್ತೆಯ ಕನ್ನಡ ಸಾಹಿತ್ಯ ಪರಿಷತ್ತು ಸಭಾಂಗಣದಲ್ಲಿ ನಡೆಯಲಿದೆ. ಸಭೆಯಲ್ಲಿ ಕನ್ನಡಿಗರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ ನಡೆಯಲಿದೆ. ಸಭೆಯಲ್ಲಿ ಎಲ್ಲಾ ಕನ್ನಡ ಸಂಘ ಸಂಸ್ಥೆಗಳು ಭಾಗವಹಿಸುವಂತೆ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಭಾಸ್ಕರ ಕಾಸರಗೋಡು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.