ಬದಿಯಡ್ಕ: ಕೇರಳ ಪ್ರದೇಶ ಸ್ಕೂಲ್ ಟೀಚರ್ಸ್ ಅಸೋಸಿಯೇಶನ್ ಕುಂಬಳೆ ಉಪಜಿಲ್ಲಾ ಸಮಿತಿಯ ವತಿಯಿಂದ ಪರಿಸರ ದಿನಾಚರಣೆ ಕುಂಬಳೆ ಉಪಜಿಲ್ಲಾ ವಿದ್ಯಾಭ್ಯಾಸ ಕಚೇರಿಯ ಮುಂಭಾಗದಲ್ಲಿ ನಡೆಯಿತು. ಕೆಪಿಎಸ್ ಟಿಎ ಕಾಸರಗೋಡು ಜಿಲ್ಲಾಧ್ಯಕ್ಷ ಪ್ರಶಾಂತ್ ಕಾನತ್ತೂರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಪಜಿಲ್ಲಾಧ್ಯಕ್ಷ ಜಲಜಾಕ್ಷಿ ಟೀಚರ್, ಕಾರ್ಯದರ್ಶಿ ನಿರಂಜನ ರೈ ಪೆರಡಾಲ, ಉಪಾಧ್ಯಕ್ಷ ರಾಮಕೃಷ್ಣ ಮಾಸ್ತರ್ ಸದಸ್ಯರು ಉಪಸ್ಥಿತರಿದ್ದರು.