ಉಪ್ಪಳ: ಕೇರಳ ರಾಜ್ಯ ಶಿಕ್ಷಣ ಇಲಾಖೆ ನಡೆಸಿದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪೈವಳಿಕೆನಗರ ಸರ್ಕಾರಿ ಹಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿಯರಾದ ರೀಮ ಡಿಸೋಜ, ಸರ್ವಾಣಿ ಪಿ ಮತ್ತು ನಿಧಿ ಎ ಶೆಟ್ಟಿಗಾರ್ ಎಲ್ಲಾ ವಿಷಯಗಳಲ್ಲಿ ಎ ಪ್ಲಸ್ ಪಡೆದು ಉತ್ತೀರ್ಣರಾಗಿದ್ದಾರೆ. ಶಾಲೆಗೆ 100 ಶೇಕಡ ಫಲಿತಾಂಶ ಲಭಿಸಿದ್ದು, ವಿದ್ಯಾರ್ಥಿಗಳನ್ನು ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದಿಸಿದೆ.