HEALTH TIPS

ಮಾಲ್ಡೀವ್ಸ್ ನ ಭಾರತೀಯ ರಾಯಭಾರ ಕಚೇರಿಯಲ್ಲಿ ಯೋಗ ದಿನಾಚರಣೆ ವೇಳೆ ಪ್ರತಿಭಟನಾಕಾರರಿಂದ ಅಡ್ಡಿ

 ಮಾಲೆ: ಮಾಲ್ಡೀವ್ಸ್ ನ ಮಾಲೆಯಲ್ಲಿ ಭಾರತೀಯ ರಾಯಭಾರ ಕಚೇರಿ ಆಯೋಜಿಸಿದ್ದ ಯೋಗ ಕಾರ್ಯಕ್ರಮಕ್ಕೆ ಪ್ರತಿಭಟನಾಕಾರರ ಗುಂಪೊಂದು ಅಡ್ಡಿಪಡಿಸಿರುವ ಘಟನೆ ವರದಿಯಾಗಿದೆ. ಮಂಗಳವಾರ ಬೆಳಗ್ಗೆ ರಾಜಧಾನಿ ಮಾಲೆಯಲ್ಲಿ ಭಾರತೀಯ ಹೈಕಮಿಷನ್ ನಲ್ಲಿ ಯೋಗ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಜನರ ಗುಂಪನ್ನು ನಿಯಂತ್ರಿಸಲು ಮಾಲ್ಡೀವ್ಸ್  ಪೊಲೀಸರು ಅಶ್ರುವಾಯು ಮತ್ತು ಪೆಪ್ಪರ್ ಸ್ಪ್ರೇ ಬಳಸಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸುವ ಕಾರ್ಯಕ್ರಮದಲ್ಲಿ ರಾಜತಾಂತ್ರಿಕರು ಮತ್ತು ಸರ್ಕಾರಿ ಅಧಿಕಾರಿಗಳು ಸೇರಿದಂತೆ 150 ಕ್ಕೂ ಹೆಚ್ಚು ಜನರು ಭಾಗವಹಿಸುತ್ತಿದ್ದ ಕ್ರೀಡಾಂಗಣಕ್ಕೆ ನುಗ್ಗಿದ ಕೆಲವರು ಯೋಗ ಮಾಡಲು ತೀವ್ರ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಯೋಗದಲ್ಲಿ ಭಾಗವಹಿಸಿದ್ದವರ ಮೇಲೆ ದಾಳಿ ಮಾಡಿ, ಆಸ್ತಿಯನ್ನು ಧ್ವಂಸಗೊಳಿಸಿದರು ಎಂದು ಆಯೋಜಕರು ತಿಳಿಸಿದ್ದಾರೆ.

ದಾಳಿಗೂ ಮುನ್ನ ಪ್ರತಿಭಟನಾಕಾರರು ಯೋಗ, ಇಸ್ಲಾಂ ತತ್ವಕ್ಕೆ ವಿರುದ್ಧವಾಗಿದೆ ಎಂಬ ಫಲಕಗಳನ್ನು ಹಿಡಿದು ವಿರೋಧಿಸಿದ್ದರು ಎಂದು ವರದಿಯಾಗಿದೆ. ಇಸ್ಲಾಂ ಮಾಲ್ಡೀವ್ಸ್ ನಲ್ಲಿ ರಾಜ್ಯ ಧರ್ಮವಾಗಿದೆ. ಸುಮಾರು ಅರ್ಧ ಮಿಲಿಯನ್ ಜನಸಂಖ್ಯೆಯನ್ನು ಹೊಂದಿರುವ ಮಾಲ್ಡೀವ್ಸ್ ಹಿಂದೂ ಮಹಾಸಾಗರದಲ್ಲಿನ ದ್ವೀಪ ರಾಷ್ಟ್ರವಾಗಿದೆ.

ಗಲಭೆಗೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದೆ. ಘಟನೆಯ ಕುರಿತು ಪೊಲೀಸ್ ತನಿಖೆ ಆರಂಭವಾಗಿದೆ ಎಂದು ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಅವರು ಹೇಳಿದ್ದಾರೆ.

ಪ್ರಕರಣವನ್ನ ಗಂಭೀರ ವಿಷಯವಾಗಿ ಪರಿಗಣಿಸಲಾಗುತ್ತಿದೆ ಮತ್ತು ಹೊಣೆಗಾರರನ್ನು ಶೀಘ್ರವಾಗಿ ಕಾನೂನಿನ ಮುಂದೆ ತರಲಾಗುವುದು ಎಂದು ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೋಲಿಹ್  ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries