ಕಾಸರಗೋಡು:| 'ಸಬ್ ಕಾ ಸಾಥ್ ಸಬ್ ಕಾ ವಿಶ್ವಾಸ್'ಎಂಬ ಘೋಷವಾಕ್ಯದಡಿ ಪಂಡಿತ್ ದೀನದಯಾಳರು ರೂಪಿಸಿದ ಅಂತ್ಯೋದಯ ಪರಿಕಲ್ಪನೆಯನ್ನು ಸಾಕಾರಗೊಳಿಸುವಲ್ಲಿ ನರೇಂದ್ರ ಮೋದಿ ನೇತೃತ್ವದ ಭಾರತ ಸರಕಾರ ಯಶಸ್ವಿಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ಪಿ.ಕೆ. ಕೃಷ್ಣದಾಸ್ ತಿಳಿಸಿದ್ದಾರೆ.
ನರೇಂದ್ರ ಮೋದಿ ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಫಲಾನುಭವಿಗಳ ಭಾಗವಹಿಸುವಿಕೆಯೊಂದಿಗೆ ಬಿಜೆಪಿ ಜಿಲ್ಲಾ ಸಮಿತಿ ಆಯೋಜಿಸಿದ್ದ ಗರೀಬ್ ಕಲ್ಯಾಣ ಜನಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಉತ್ತಮ ಆಡಳಿತದ ಮೂಲಕ ದೇಶದ ಪ್ರತಿಷ್ಠೆಯನ್ನು ಎತ್ತರಕ್ಕೇರಿಸಿದ ನರೇಂದ್ರ ಮೋದಿ ಸರ್ಕಾರ ಭಾರತವನ್ನು ವಿಶ್ವಗುರುವಾಗಿಸುವ ಪ್ರಯತ್ನ ನಡೆಸುತ್ತಿದೆ. ಆದರೆ ಮುಖ್ಯ ಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಕೇರಳವನ್ನು ಭೂಗತ ಲೋಕಕ್ಕೆ ಧಾರೆಯೆರೆಯುತ್ತಿದೆ. ಸೋಲಾರ್ ಪ್ರಕರಣದ ನಾಯಕಿ ಸರಿತಾ ಆರೋಪವನ್ನು ಕೈಗೆತ್ತಿಕೊಂಡಿರುವ ಎಡಪಕ್ಷಗಳು ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್ ಅವರನ್ನು ನಕಲಿ ಕೇಸುಗಳ ಮೂಲಕ ಪ್ರಕರಣ ಮುಚ್ಚಿ ಹಾಕಲು ಯತ್ನಿಸುತ್ತಿವೆ. ಎಂ. ಬಾಲರಾಜ್, ಎಂ. ಜನನಿ, ರೂಪವಾಣಿ ಭಟ್, ಕಾರ್ಯದರ್ಶಿಗಳು, ಎಂ. ಉಮಾ, ಮನುಲಾಲ್ ಮೇಲತ್, ಎಂ ಮಣಿಕಂದ ರೈ, ಕೋಶಾಧಿಕಾರಿ ಮಹಾಬಲ ರೈ, ರಾಜ್ಯ ಸಮಿತಿ ಸದಸ್ಯ ಸತೀಶ್ ಚಂದ್ರ ಭಂಡಾರಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಪುಷ್ಪಾ ಗೋಪಾಲನ್ ಹಾಗೂ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ಎ.ಕೆ. ಕಯ್ಯಾರ್, ಜಿಲ್ಲಾಧ್ಯಕ್ಷ ಸಂಪತ್ ಕುಮಾರ್ ಹಾಗೂ ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಈಶ್ವರ ಮಾಸ್ತರ್ ಉಪಸ್ಥಿತರಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಿಜಯ್ ಕುಮಾರ್ ರೈ ಸ್ವಾಗತಿಸಿ, ಎ. ವೇಲಾಯುಧನ್ ವಂದಿಸಿದರು.