ನವದೆಹಲಿ: ಮಹಾರಾಷ್ಟ್ರ ರಾಜ್ಯದ ಹಿತಾಸಕ್ತಿಯಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಮನವಿ ಮೇರೆಗೆ ದೇವೇಂದ್ರ ಫಡ್ನವೀಸ್ ಸರ್ಕಾರದಲ್ಲಿ ಸೇರಲು ನಿರ್ಧರಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಸಂಜೆ ತಿಳಿಸಿದ್ದಾರೆ.
ನಿನ್ನೆ ಮಧ್ಯಾಹ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವೇಂದ್ರ ಫಡ್ನವೀಸ್, ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ಅವರಿಗೆ ಬಿಜೆಪಿ ನೈತಿಕ ಬೆಂಬಲ ನೀಡುವುದಾಗಿ ಹೇಳಿದ್ದರು.
ಬಳಿಕ ನಡೆದ ಬೆಳವಣಿಗೆಯಲ್ಲಿ ಫಡ್ನವೀಸ್ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಘೋಷಿಸಿದರು.