ಉಪ್ಪಳ: ಬಾಯಾರು ಶ್ರೀ ಸತ್ಯಸಾಯಿ ಸೇವಾ ಸಮಿತಿ ಮತ್ತು ಮಂಗಳೂರು ಅತ್ತವರ ಕೆಎಂಸಿ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ವೈದ್ಯಕೀಯ, ನೇತ್ರ ತಪಾಸಭಾ ಶಿಬಿರ ಜೂ. 19ರಂದು ಬಾಯಾರು ಪ್ರಶಾಂತಿ ವಿದ್ಯಾಕೇಂದ್ರದಲ್ಲಿ ಜರುಗಲಿದೆ. ಬೆಳಗ್ಗೆ 9ರಿಂದ ಮಧ್ಯಾಹ್ನ 12.30ರ ವರೆಗೆ ಶಿಬಿರ ನಡೆಯಲಿರುವುದು. ಅಲ್ಲದೆ ಜನರಲ್ ಮೆಡಿಸಿನ್, ಎಲುಬು, ಇ-ಎನ್-ಟಿ ಹಾಗೂ ಮಕ್ಕಳ ತಜ್ಞರು ಶಿಬಿರದಲ್ಲಿ ಭಾಗವಹಿಸಿ, ತಪಾಸಣೆ ನಡೆಸಲಿರುವುದಾಗಿ ಪ್ರಕಟಣೆ ತಿಳಿಸಿದೆ.