ಬೆಂಗಳೂರು: ಕೇಂದ್ರ ಸರ್ಕಾರ ಘೋಷಿಸಿರುವ ಅಗ್ನಿಪಥ ಯೋಜನೆ ಕುರಿತು ದೇಶದ ಹಲವೆಡೆ ಪ್ರತಿಭಟನೆ ನಡೆಯುತ್ತಿದೆ. ಆದರೆ ಈ ಮಧ್ಯೆ, ಉದ್ಯಮಿ ಆನಂದ್ ಮಹೀಂದ್ರಾ ಅವರು ಅಗ್ನಿವೀರರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಲು ಮುಂದಾಗಿದ್ದಾರೆ.
ಬೆಂಗಳೂರು: ಕೇಂದ್ರ ಸರ್ಕಾರ ಘೋಷಿಸಿರುವ ಅಗ್ನಿಪಥ ಯೋಜನೆ ಕುರಿತು ದೇಶದ ಹಲವೆಡೆ ಪ್ರತಿಭಟನೆ ನಡೆಯುತ್ತಿದೆ. ಆದರೆ ಈ ಮಧ್ಯೆ, ಉದ್ಯಮಿ ಆನಂದ್ ಮಹೀಂದ್ರಾ ಅವರು ಅಗ್ನಿವೀರರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಲು ಮುಂದಾಗಿದ್ದಾರೆ.
ಮಹೀಂದ್ರಾ ಸಮೂಹ ಸಂಸ್ಥೆಗಳಲ್ಲಿ, ಅರ್ಹ, ಕೌಶಲ ಹೊಂದಿರುವ ಮತ್ತು ಪರಿಣತ ಅಗ್ನಿವೀರರಿಗೆ ಉದ್ಯೋಗಾವಕಾಶ ಕಲ್ಪಿಸಲಾಗುತ್ತದೆ. ಇದರಿಂದ, ನಮಗೆ ಸಮರ್ಥ ಅಭ್ಯರ್ಥಿ ದೊರೆಯಲಿದೆ ಎಂದು ಆನಂದ್ ಮಹೀಂದ್ರಾ ಹೇಳಿದ್ದಾರೆ.
ಮಹೀಂದ್ರಾ ಸಮೂಹದ ವಿವಿಧ ಉದ್ಯಮಗಳಲ್ಲಿ ಅಗ್ನಿವೀರರಿಗೆ ಉದ್ಯೋಗ ಒದಗಿಸಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.