ಕಣ್ಣೂರು: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಯೂತ್ ಕಾಂಗ್ರೆಸ್ ಕಾರ್ಯಕರ್ತರು ವಿಮಾನದೊಳಗೆ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಡಿವೈಎಫ್‌ಐ ರಾಜ್ಯಾದ್ಯಂತ ವ್ಯಾಪಕ ಪ್ರತಿಭಟನೆ ನಡೆಸಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಎಡರಂಗದ ಸಂಚಾಲಕ ಇಪಿ ಜಯರಾಜನ್ ಮತ್ತು ಕೆಪಿಸಿಸಿ ಅಧ್ಯಕ್ಷ ಕೆ.ಸುಧಾಕರನ್ ಅವರ ಮನೆಗಳಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಜಿಲ್ಲೆಯ ಬೇರೆಡೆಯಿಂದ ಹೆಚ್ಚಿನ ಪೊಲೀಸರನ್ನು ನಿಯೋಜಿಸಲು ನಿರ್ಧರಿಸಲಾಗಿದೆ. ಪಕ್ಷದ ಕಚೇರಿಗಳ ಮೇಲೂ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಕಚೇರಿಗಳ ಭದ್ರತೆಯನ್ನೂ ಹೆಚ್ಚಿಸಲಾಗಿದೆ.