ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿಯು ನೀಡುವ ಅನುವಾದ ಪುಸ್ತಕ ಪ್ರಶಸ್ತಿಗೆ ಹಿರಿಯ ಲೇಖಕ ಡಾ.ಗುರುಲಿಂಗ ಕಾಪಸೆ ಆಯ್ಕೆಯಾಗಿದ್ದಾರೆ.
ಖಾಂಡೇಕರ್ ಅವರು ಮರಾಠಿಯ ಮೊದಲ ಜ್ಞಾನಪೀಠ ಪ್ರಶಸ್ತಿ ಪಡೆದ ಲೇಖಕರು. ಅವರ 'ಯಯಾತಿ ' ಎಂಬ ಕೃತಿಗೆ ಜ್ಞಾನಪೀಠ ಪ್ರಶಸ್ತಿಯು ಬಂದಿತ್ತು.
ಡಾ ಕಾಪಸೆಯವರು ಅನುವಾದಿಸಿದ ಖಾಂಡೇಕರ್ ಅವರ ಆತ್ಮಕಥೆಯು ಕಳೆದ ಶತಮಾನದ ಭಾರತದ ಅದರಲ್ಲಿಯೂ ಮಹಾರಾಷ್ಟದ ಕೊಂಕಣ ಭಾಗದ ಸಾಮಾಜಿಕ, ಆರ್ಥಿಕ, ರಾಜಕೀಯ, ಜಾತೀಯ ಸ್ಥಿತಿಗತಿಗಳ ಸಮಗ್ರವಾದ ವಿವರಣೆ ನೀಡುತ್ತದೆ. ವಿಶೇಷವೆಂದರೆ ಖಾಂಡೇಕರ್ ಅವರು ಕರ್ನಾಟಕದ ಅದರಲ್ಲೂ ಬೆಳಗಾವಿ ಜಿಲ್ಲೆಯ ಅಳಿಯ. ಖಾನಾಪುರ ತಾಲೂಕಿನ ಅಸೋಗಾ ಗ್ರಾಮದ ಮಣೇರಿಕರ್ ಕುಟುಂಬದ ಉಷಾ ಅವರು ಖಾಂಡೇಕರ್ ರ ಹೆಂಡತಿ. ಮದುವೆಗಾಗಿ ಅವರು ಮಹಾರಾಷ್ಟ್ರದ ರತ್ನಾಗಿರಿಯಿಂದ ಅಸೋಗಾ ಗ್ರಾಮದ ವರೆಗೆ ಚಕ್ಕಡಿ ಕಟ್ಟಿಕೊಂಡು ಬಂದ ವಿವರಗಳನ್ನು ಕೃತಿಯಲ್ಲಿ ನೀಡಿದ್ದಾರೆ.
ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ವಿಭಾಗದ ಸಂಚಾಲಕ ಡಾ ಸರಜೂ ಕಾಟ್ಕರ್ ಉಸ್ತುವಾರಿಯಲ್ಲಿ ನಡೆದ ಅನುವಾದ ಸಾಹಿತ್ಯ ಪ್ರಶಸ್ತಿ ಆಯ್ಕೆ ಸಮಿತಿಯು ಡಾ ಕಾಪಸೆ ಯವರು ಅನುವಾದಿಸಿದ ಈ ಕೃತಿಯನ್ನು ಪ್ರಶಸ್ತಿಗೆ ಆಯ್ಕೆಮಾಡಿತು. ಆಯ್ಕೆ ಸಮಿತಿಯ ಜ್ಯೂರಿಗಳಾಗಿ ಹಿರಿಯ ಲೇಖಕ ಡಾ ಬಸವರಾಜ ಕಲ್ಗುಡಿ, ಕವಿಗಳಾದ ಬಿ.ಆರ್. ಲಕ್ಷ್ಮಣರಾವ್ ಹಾಗೂ ಡಾ ಸುಬ್ಬು ಹೊಲೆಯಾರ್ ಇದ್ದರು.ಪ್ರಶಸ್ತಿ ಪ್ರದಾನ ಸಮಾರಂಭವು ಆಗಸ್ಟ್ ಅಥವಾ ಸೆಪ್ಟೆಂಬರ್ ತಿಂಗಳಲ್ಲಿ ನವದೆಹಲಿಯಲ್ಲಿ ನೆರವೇರಲಿದೆ. ಪ್ರಶಸ್ತಿಯು 50 ಸಾವಿರ ರುಪಾಯಿ ನಗದು , ಸ್ಮತಿ ಫಲಕ ,ಶಾಲು ಸನ್ಮಾನ ಒಳಗೊಂಡಿದೆ ಎಂದು
ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಕಟಣೆ ತಿಳಿಸಿದೆ.