ಮಲಪ್ಪುರಂ: ಸ್ವಾತಂತ್ರ್ಯ ಹೋರಾಟದ ಸ್ಮಾರಕ ಭೂಮಿಯಲ್ಲಿ ಉದ್ದೇಶಿಸಿದ್ದ ಶೌಚಾಲಯ ನಿರ್ಮಾಣಕ್ಕೆ ತಡೆ ನೀಡಿ ನ್ಯಾಯಾಲಯ ಆದೇಶ ನೀಡಿದೆ. ರಾಜ್ಯದ ಏಕೈಕ ಸ್ವಾತಂತ್ರ್ಯ ಹೋರಾಟದ ಸ್ಮಾರಕ ಭೂಮಿ
ಯಲ್ಲಿ ನಿರ್ಮಾಣವಾಗುತ್ತಿರುವ ಕಟ್ಟಡ ನಿರ್ಮಾಣವನ್ನು ನಿಲ್ಲಿಸುವಂತೆ ಆದೇಶವಾಗಿದೆ. ಪೊನ್ನಾನಿ ಮುನ್ಸಿಫ್ ಮ್ಯಾಜಿಸ್ಟ್ರೇಟ್ ಎಂ.ಆರ್.ದಿಲೀಪ್ ಆದೇಶ ಹೊರಡಿಸಿದ್ದಾರೆ.
ಸ್ವಾತಂತ್ರ್ಯ ಹೋರಾಟದ ಸ್ಮಾರಕದ ಜಾಗದಲ್ಲಿ ವಿಶ್ರಾಂತಿ ಗೃಹ ಹೆಸರಿನಲ್ಲಿ ಶೌಚಾಲಯ ನಿರ್ಮಾಣ ಕಾಮಗಾರಿ ನಡೆಸಲಾಗುತ್ತಿದೆ. ಇದು ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಆರೋಪಿಸಿ ತಿರೂರ್ ಮೂಲದ ದಿನೇಶ್ ಎಂಬವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.