ನವದೆಹಲಿ: ಉಕ್ರೇನ್ ಯುದ್ಧದ ಪರಿಣಾಮ, ಜಾಗತಿಕವಾಗಿ ಹಣದುಬ್ಬರ ಏರಿಕೆ ಮತ್ತು ಆಹಾರದ ಕೊರತೆಗೆ ಕಾರಣವಾಗಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.
ನವದೆಹಲಿ: ಉಕ್ರೇನ್ ಯುದ್ಧದ ಪರಿಣಾಮ, ಜಾಗತಿಕವಾಗಿ ಹಣದುಬ್ಬರ ಏರಿಕೆ ಮತ್ತು ಆಹಾರದ ಕೊರತೆಗೆ ಕಾರಣವಾಗಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.
ಜಾಗತಿಕವಾಗಿ ಇಂಧನ, ಆಹಾರ ಮತ್ತು ರಸಗೊಬ್ಬರ ಸಮಸ್ಯೆಗೆ ಉಕ್ರೇನ್ ಯುದ್ಧ ಕಾರಣವಾಗಿದೆ.
ಬೆಂಗಳೂರಿನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸೈನ್ಸನ್‌ನಲ್ಲಿ ವಿದ್ಯಾರ್ಥಿಗಳು ಮತ್ತು ಸಂಶೋಧಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಯುದ್ಧದ ಪರಿಣಾಮ ಉಂಟಾಗಿರುವ ರಸಗೊಬ್ಬರದ ಕೊರತೆಯು ಪರೋಕ್ಷವಾಗಿ ಸಮಸ್ಯೆ ಸೃಷ್ಟಿಸಬಹುದು. ಅದರಿಂದ ಮುಂದೆ, ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಬಹುದು. ಇದು ಆಹಾರದ ಕೊರತೆಗೆ ದಾರಿ ಮಾಡಿಕೊಡಬಹುದು ಎಂದು ಹೇಳಿದ್ದಾರೆ.