ಕೋಲ್ಕತ್ತ: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೂವರು ಭಕ್ತರು ಬಿಸಿಲಿನ ಶಾಖದಿಂದ ಮೃತಪಟ್ಟಿದ್ದಾರೆ ಎಂದು ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಕೋಲ್ಕತ್ತ: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೂವರು ಭಕ್ತರು ಬಿಸಿಲಿನ ಶಾಖದಿಂದ ಮೃತಪಟ್ಟಿದ್ದಾರೆ ಎಂದು ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಪಾನೀಹಾಟಿಯ ಇಸ್ಕಾನ್ ದೇವಸ್ಥಾನದ ದಂಡ ಮಹೋತ್ಸವದಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಧಾವಿಸಿದ್ದಾರೆ.
ವಿಪರೀತ ಬಿಸಿಲು ಮತ್ತು ಜನಸಂದಣಿಯಿಂದಾಗಿ ಗಂಭೀರವಾಗಿ ಅಸ್ವಸ್ಥಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಖಚಿತಪಡಿಸಲಾಯಿತು ಎಂದು ಪೊಲೀಸ್ ಅಧಿಕಾರಿ ಧ್ರುವಜ್ಯೋತಿ ದೇವ್ ತಿಳಿಸಿದ್ದಾರೆ.