ನವದೆಹಲಿ: ಏಳು ದಿನಗಳ ಅವಧಿಯಲ್ಲಿ ಕೋವಿಡ್-19 ಪ್ರಕರಣಗಳು ಉಲ್ಬಣಗೊಂಡ ಜಿಲ್ಲೆಗಳು ಮತ್ತು ಪ್ರದೇಶಗಳಿಂದ ದೊಡ್ಡ ಸಂಖ್ಯೆಯಲ್ಲಿ ಮಾದರಿಗಳನ್ನು ಸಲ್ಲಿಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಕುಟುಂಬ ಕಲ್ಯಾಣ ಸಚಿವಾಲಯವು ಸೂಚಿಸಿದೆ ಎಂದು ಶನಿವಾರ ಅಧಿಕೃತ ಮೂಲಗಳು ತಿಳಿಸಿವೆ.
ಹೊಸ ರೂಪಾಂತರಿ ಅಥವಾ ಉಪ ತಳಿಗಳ ರೂಪಾಂತರಿಗಳ ಸಾಧ್ಯತೆಯನ್ನು ಪರಿಶೀಲಿಸಲು ಹಾಗೂ ಸೋಂಕಿನ ಹಿಂದಿನ ಕಾರಣಗಳನ್ನು ತಿಳಿಯಲು ವೈರಾಣು ತಳಿ ಸಂರಚನೆ ವಿಶ್ಲೇಷಣಾ ಪರೀಕ್ಷೆ ನಡೆಸಲು ಶುಕ್ರವಾರ ನಡೆದ ಸಭೆಯಲ್ಲಿ ಇಂಡಿಯನ್ ಸಾರ್ಸ್-ಕೋವ್ 2 ಜೀನೊಮಿಕ್ಸ್ ಕನ್ಸ್‌ಸೋರ್ಷಿಯಂ (ಐಎನ್‌ಎಸ್‌ಎಸಿಒಜಿ) ಈ ನಿರ್ದೇಶನ ನೀಡಿದೆ.
ದೇಶದಲ್ಲಿ ಮಹಾರಾಷ್ಟ್ರ, ಕೇರಳ, ದೆಹಲಿ, ಕರ್ನಾಟಕ, ತಮಿಳುನಾಡು, ಹರಿಯಾಣ, ಉತ್ತರಪ್ರದೇಶ, ತೆಲಂಗಾಣ, ಪಶ್ಚಿಮ ಬಂಗಾಳ ಮತ್ತು ಗುಜರಾತ್‌ನಲ್ಲಿ ಇದುವರೆಗೆ ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ ಎಂದು ಮೂಲಗಳು ತಿಳಿಸಿವೆ.