ಚಂಡೀಗಡ: ಗಾಯಕ ಸಿಧು ಮೂಸೆವಾಲಾ ಅವರ ತಂದೆ ಬಲ್ ಕೌರ್‌ಸಿಂಗ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ತಮ್ಮ ಪುತ್ರನ ಹತ್ಯೆ ಕುರಿತು ಕೇಂದ್ರೀಯ ಸಂಸ್ಥೆಗಳಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಚಂಡೀಗಡ: ಗಾಯಕ ಸಿಧು ಮೂಸೆವಾಲಾ ಅವರ ತಂದೆ ಬಲ್ ಕೌರ್‌ಸಿಂಗ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ತಮ್ಮ ಪುತ್ರನ ಹತ್ಯೆ ಕುರಿತು ಕೇಂದ್ರೀಯ ಸಂಸ್ಥೆಗಳಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಪಂಜಾಬ್‌ನ ಮಾನ್ಸಾ ಜಿಲ್ಲೆಯಲ್ಲಿ ಮೇ 29ರಂದು ಅಪರಿಚಿತ ದುಷ್ಕರ್ಮಿಗಳು ಮೂಸೆವಾಲಾ ಅವರನ್ನು ಹತ್ಯೆ ಮಾಡಿದ್ದರು.
'ಈಗಾಗಲೇ ಸಿಧು ಕುಟುಂಬದವರು ಅಮಿತ್ ಶಾ ಅವರಿಗೆ ಪತ್ರ ಬರೆದು ಕೇಂದ್ರೀಯ ಸಂಸ್ಥೆಗಳಿಂದ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ' ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿಳಿಸಿದರು.
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಸಿಧು ನಿವಾಸಕ್ಕೆ ಭೇಟಿ ನೀಡಿ, ಶೀಘ್ರ ತಪ್ಪಿತಸ್ಥರನ್ನು ಬಂಧಿಸಲಾಗುವುದು ಎಂದು ಭರವಸೆ ನೀಡಿದ್ದರು. ಮೂಸೆವಾಲಾ ಅವರ ದೇಹದಲ್ಲಿ 19 ಗುಂಡುಗಳ ಗಾಯದ ಗುರುತುಗಳಿರುವುದು ಮರಣೋತ್ತರ ಪರೀಕ್ಷೆಯಲ್ಲಿ ವರದಿಯಾಗಿದೆ.