ಕಾಸರಗೋಡು: ನಗರದ ನೆಲ್ಲಿಕುಂಜೆಯಲ್ಲಿರುವ ಸರ್ಕಾರಿ ಹೆಣ್ಮಕ್ಕಳ ಶಾಲೆಯಲ್ಲಿ ಕನ್ನಡ ಮಾಧ್ಯಮ ಗಣಿತ ಅಧ್ಯಾಪಕ ಹುದ್ದೆ ಖಾಲಿಯಿದೆ. ದಿನವೇತನದ ಆಧಾರದಲ್ಲಿ ನಡೆಯುವ ನೇಮಕಾತಿಗಾಗಿ ಅರ್ಹತೆಯುಳ್ಳವರು ಜೂನ್ 24ರಂದು ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಶಾಲೆಯಲ್ಲಿ ನಡೆಯಲಿರುವ ಸಂದರ್ಶನದಲ್ಲಿ ಅಸಲಿ ಪ್ರಮಾಣ ಪತ್ರಗಳೊಂದಿಗೆ ಹಾಜರಾಗಬಹುದೆಂದು ಶಾಲಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.