ಕಣ್ಣೂರು: ರಾಜತಾಂತ್ರಿಕ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಮಾಹಿತಿ ಹೊರಬಿದ್ದಿದ್ದು, ಮುಖ್ಯಮಂತ್ರಿ ವಿರುದ್ಧ ಪ್ರತಿಭಟನೆ ಜೋರಾಗಿದೆ. ಕಣ್ಣೂರಿನಲ್ಲಿ ಮುಖ್ಯಮಂತ್ರಿಯನ್ನು ಬೀದಿಗಿಳಿದು ಬಂಧಿಸುವಂತೆ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.
ಯುವ ಕಾಂಗ್ರೆಸ್ ಮಟ್ಟನ್ನೂರು ಕ್ಷೇತ್ರ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಸಾಂಕೇತಿಕವಾಗಿ ಮುಖ್ಯಮಂತ್ರಿಯನ್ನು ಮಟ್ಟನ್ನೂರು ಠಾಣೆಗೆ ಹಸ್ತಾಂತರಿಸಿದರು.
ಇದೇ ವೇಳೆ ಮುಖ್ಯಮಂತ್ರಿ ಭಾಗವಹಿಸುವ ಸಾರ್ವಜನಿಕ ಕಾರ್ಯಕ್ರಮಕ್ಕೆ ಭಾರೀ ಭದ್ರತೆ ಏರ್ಪಡಿಸಲಾಗಿತ್ತು. ಮಲಪ್ಪುರಂ ಒಂದರಲ್ಲೇ ಸುಮಾರು 700 ಪೆÇಲೀಸರು ಭದ್ರತಾ ಕಾರ್ಯದಲ್ಲಿ ನಿರತರಾಗಿದ್ದರು. ಪ್ರತಿಭಟನಾಕಾರರು ಪೆÇಲೀಸರ ರಕ್ಷಣಾ ಬೇಲಿ ದಾಟಿ ಮುಂದೊತ್ತಿದರು, ಮಾರ್ಗದ ವಿವಿಧೆಡೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು.