ಕೊಚ್ಚಿ: ಶವರ್ಮಾದಿಂದ ಆಹಾರ ವಿಷವಾಗಿ ವಿದ್ಯಾರ್ಥಿನಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸಲ್ಲಿಸಿರುವ ಅರ್ಜಿಯನ್ನು ಇಂದು ಮತ್ತೆ ಪರಿಗಣಿಸಲಾಗುವುದು. ವಿದ್ಯಾರ್ಥಿಯ ಸಾವಿನ ನಂತರ ಆಹಾರ ಸುರಕ್ಷತಾ ಇಲಾಖೆ ರಾಜ್ಯಾದ್ಯಂತ ತಪಾಸಣೆ ನಡೆಸಿ 115 ಕೆಜಿ ಹಳಸಿದ ಮಾಂಸವನ್ನು ವಶಪಡಿಸಿಕೊಂಡು ನಾಶಪಡಿಸಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.
ಈ ಸಂಬಂಧ ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ ಕಳೆದ ಬಾರಿ ಸರಕಾರವನ್ನು ಕಟು ಭಾಷೆಯಲ್ಲಿ ಟೀಕಿಸಿತ್ತು. ಮಗು ಸಾವನ್ನಪ್ಪಿದ ನಾಲ್ಕು ದಿನಗಳ ನಂತರ ಪರೀಕ್ಷೆ ನಡೆಸಲಾಗಿದ್ದು, ಇದರ ಬದಲು ಮೊದಲೇ ಈ ಕ್ರಮ ಕ್ಯೆಗೊಂಡಿದ್ದಲ್ಲಿ ಅನಾಹುತ ತಪ್ಪಿಸಬಹುದಿತ್ತು ಎಂದೂ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ವರ್ಷವಿಡೀ ಮಿಂಚಿನ ತಪಾಸಣೆ ನಡೆಸುವಂತೆಯೂ ನ್ಯಾಯಾಲಯ ಸೂಚಿಸಿದೆ. ಆದರೆ, ವಿದ್ಯಾರ್ಥಿ ಸಾವಿಗೆ ಕಾರಣವಾದ ಅಂಗಡಿಯ ಪರವಾನಿಗೆಯನ್ನು ನವೀಕರಿಸದೆ, ಕಾರ್ಯನಿರ್ವಹಿಸದಂತೆ ಸೂಚನೆ ನೀಡಲಾಗಿದೆ ಎಂದು ಸರ್ಕಾರ ವಿವರಿಸಿದೆ.