ಬದಿಯಡ್ಕ: ಪೆರಡಾಲ ನವಜೀವನ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಕವಿ ನಾಡೋಜ ಕೈಯಾರ ಕಿಞ್ಞಣ್ಣ ರೈ ಗಳ 107 ನೇ ಜನ್ಮದಿನಾಚರಣೆ ಕಾರ್ಯಕ್ರಮ ಬುಧವಾರ ನಡೆಯಿತು.
ಶಾಲಾ ಮುಖ್ಯೋಪಾಧ್ಯಾಯಿನಿ ಮಿನಿ ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ ಕಯ್ಯಾರರು ಈ ಶಾಲೆಯಲ್ಲಿ ಕನ್ನಡ ಅಧ್ಯಾಪಕರಾಗಿ, ಬದಿಯಡ್ಕ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಶಿಕ್ಷಣ ಕ್ಷೇತ್ರಕ್ಕೆ ಕೊಟ್ಟ ಕೊಡುಗೆ ಅಪಾರ. ಈ ಸಂದರ್ಭದಲ್ಲಿ ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಶಾಲಾ ನೌಕರ ಸಂಘದ ಕಾರ್ಯದರ್ಶಿ ಕಾರ್ತಿಕ ಟೀಚರ್, ಉಣ್ಣಿಕೃಷ್ಣ ಮಾಸ್ತರ್, ಪ್ರಭಾವತಿ ಕೆದಿಲಾಯ ಕಾರ್ಯಕ್ರಮಕ್ಕೆ ಶುಭಾಶಂಸನೆಗೈದರು. ಅಧ್ಯಾಪಕಿ ಜ್ಯೋಸ್ನ್ಸಾ ಕಡಂದೇಲು, ಪುಟಾಣಿ ವಿದ್ಯಾರ್ಥಿಗಳು ಕಿಞ್ಞಣ್ಣ ರೈಗಳು ರಚಿಸಿದ ಕವನ ವಾಚಿಸಿದರು. ನಿರಂಜನ್ ರೈ ಪೆರಡಾಲ ಪ್ರಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ರಾಜೇಶ್ ಮಾಸ್ತರ್ ಅಗಲ್ಪಾಡಿ ವಂದಿಸಿದರು.