ನವದೆಹಲಿ: ಹಲವು ದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಪ್ರಸರಣಕ್ಕೆ ಕಡಿವಾಣ ಹಾಕುವುದಕ್ಕಾಗಿ ಕೇಂದ್ರ ಸರ್ಕಾರ ಮಂಗಳವಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ನವದೆಹಲಿ: ಹಲವು ದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಪ್ರಸರಣಕ್ಕೆ ಕಡಿವಾಣ ಹಾಕುವುದಕ್ಕಾಗಿ ಕೇಂದ್ರ ಸರ್ಕಾರ ಮಂಗಳವಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
'ಜಿಲ್ಲಾ ಮಟ್ಟದಲ್ಲಿ ತೀವ್ರ ನಿಗಾ ವಹಿಸಬೇಕು.
ಈ ಸಂಬಂಧ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಪತ್ರ ಬರೆದಿದೆ. 'ಮಂಕಿಪಾಕ್ಸ್ ಪ್ರಕರಣಗಳನ್ನು ತ್ವರಿತವಾಗಿ ಪತ್ತೆ ಹಚ್ಚಿ, ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ವ್ಯಕ್ತಿಯಿಂದ ವ್ಯಕ್ತಿಗೆ ಸೋಂಕು ಪ್ರಸರಣವಾಗುವುದನ್ನು ತಡೆಯಲು ಈ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು' ಎಂದು ಪತ್ರದಲ್ಲಿ ಸೂಚಿಸಲಾಗಿದೆ.
'ಈ ವರೆಗೂ ಮಂಕಿಪಾಕ್ಸ್ ಸೋಂಕು ಕಂಡುಬರದಿದ್ದ ದೇಶಗಳಲ್ಲಿಯೂ ಈಗ ಪ್ರಕರಣಗಳು ವರದಿಯಾಗುತ್ತಿವೆ. ದೇಶದಲ್ಲಿ ಈ ವರೆಗೆ ಈ ಸೋಂಕಿನ ಪ್ರಕರಣಗಳು ಕಂಡಬರದಿದ್ದರೂ, ಹೆಚ್ಚು ಮುಂಜಾಗ್ರತೆ ಅಗತ್ಯ' ಎಂದು ವಿವರಿಸಲಾಗಿದೆ.
ಕ್ಯಾಮರೂನ್, ಕಾಂಗೊ, ಗ್ಯಾಬೊನ್, ನೈಜೀರಿಯಾ ಸೇರಿದಂತೆ ಕೇಂದ್ರ ಹಾಗೂ ಪಶ್ಚಿಮ ಆಫ್ರಿಕಾ ದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿವೆ. ಜೊತೆಗೆ, ಕೆಲ ಐರೋಪ್ಯ ದೇಶಗಳಲ್ಲಿಯೂ ಸೋಂಕಿನ ಪ್ರಕರಣಗಳು ವರದಿಯಾಗಿವೆ.