HEALTH TIPS

ಹಕ್ಕುಗಳನ್ನು ರಕ್ಷಿಸುವುದು ಅಪರಾಧವಲ್ಲ: ತೀಸ್ತಾ ಸೆತಲ್ವಾಡ್ ಪರ ಧ್ವನಿ ಎತ್ತಿದ ವಿಶ್ವಸಂಸ್ಥೆ ಅಧಿಕಾರಿ!

 ನವದೆಹಲಿ: ವಿಶ್ವಸಂಸ್ಥೆಯ ಅಧಿಕಾರಿಯೊಬ್ಬರು ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ಬಂಧನವನ್ನು ಖಂಡಿಸಿದ್ದು, ಮಾನವ ಹಕ್ಕುಗಳನ್ನು ರಕ್ಷಿಸುವುದು ಅಪರಾಧವಲ್ಲ ಎಂದು ಹೇಳಿದ್ದಾರೆ.

ಆಳವಾದ ಕಳವಳವನ್ನು ವ್ಯಕ್ತಪಡಿಸಿರುವ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ರಕ್ಷಕರ ವಿಶೇಷ ವರದಿಗಾರ್ತಿ ಮೇರಿ ಲಾಲರ್, ತೀಸ್ತಾ ದ್ವೇಷ ಮತ್ತು ತಾರತಮ್ಯದ ವಿರುದ್ಧ ಬಲವಾದ ಧ್ವನಿಯಾಗಿದ್ದಾರೆ ಎಂದು ಹೇಳಿದರು.

2002 ರ ಗುಜರಾತ್ ಗಲಭೆ ಪ್ರಕರಣದ ಬಗ್ಗೆ ಕೋರ್ಟ್ ನಲ್ಲಿ ಕೇಸ್ ಹೂಡಿದ್ದ ಪ್ರಕರಣದಲ್ಲಿ ಬೇರೆಯವರ ಪ್ರಚೋದನೆಯನ್ನು ಖಂಡಿಸಿದ ಒಂದು ದಿನದ ನಂತರ, ಶನಿವಾರ ಸಂಜೆ ಮುಂಬೈನಿಂದ ಗುಜರಾತ್ ಪೊಲೀಸರ ಭಯೋತ್ಪಾದನಾ ನಿಗ್ರಹ ದಳ ತೀಸ್ತಾ ಸೆತಲ್ವಾಡ್ ಅವರನ್ನು ವಶಕ್ಕೆ ಪಡೆಯಿತು.

ಗೃಹ ಸಚಿವ ಅಮಿತ್ ಶಾ ಅವರು ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ 2002 ರ ಗುಜರಾತ್ ದಂಗೆಗಳ ಬಗ್ಗೆ ಆಧಾರರಹಿತ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದಕ್ಕಾಗಿ ತೀಸ್ತಾ ಸೆತಲ್ವಾಡ್ ನಡೆಸುತ್ತಿರುವ ಎನ್ ಜಿಓ ನ ದೂಷಿಸಿದ ಕೆಲವೇ ಗಂಟೆಗಳ ನಂತರ ತೀಸ್ತ ಖಾಕಿ ಬಲೆಯಲ್ಲಿದ್ದರು.

ನಾನು ತೀರ್ಪನ್ನು ಬಹಳ ಎಚ್ಚರಿಕೆಯಿಂದ ಓದಿದ್ದೇನೆ. ತೀರ್ಪಿನಲ್ಲಿ ತೀಸ್ತಾ ಸೆತಲ್ವಾಡ್ ಅವರ ಹೆಸರನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಅವರು ನಡೆಸುತ್ತಿರುವ ಎನ್‌ಜಿಒ  ಗಲಭೆಯ ಬಗ್ಗೆ ಪೊಲೀಸರಿಗೆ ಆಧಾರರಹಿತ ಮಾಹಿತಿ ನೀಡಿದೆ ಎಂದು ಅಮಿತ್ ಶಾ ಹೇಳಿದ್ದರು.

ಗಲಭೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಅಂದು ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ಪ್ರಧಾನಿ ಮೋದಿಯವರಿಗೆ ಕ್ಲೀನ್ ಚಿಟ್ ನೀಡಿದ್ದನ್ನ ಪ್ರಶ್ನಿಸಿ ಝಾಕಿಯಾ ಜಾಫ್ರಿ ಸಲ್ಲಿಸಿದ ಮನವಿಯನ್ನು ಅರ್ಹತೆ ಇಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಝಾಕಿಯಾ ಜಾಫ್ರಿ ಗಲಭೆಯಲ್ಲಿ ಹತರಾದ ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ಪತ್ನಿ.

ನ್ಯಾಯಮೂರ್ತಿ ಎಎಂ ಖಾನ್ವಿಲ್ಕರ್ ನೇತೃತ್ವದ ನ್ಯಾಯಾಲಯದ ತ್ರಿಸದಸ್ಯ ಪೀಠವು ಪ್ರಕರಣದ ಸಹ-ಅರ್ಜಿದಾರರಾದ ತೀಸ್ತಾ ಸೆತಲ್ವಾಡ್ ಅವರು ಝಕಿಯಾ ಜಾಫ್ರಿ ಅವರ ಭಾವನೆಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ತೀಸ್ತಾ ಸೆತಲ್ವಾಡ್ ಅವರ ಪೂರ್ವಾಪರಗಳನ್ನು ಗಣನೆಗೆ ತೆಗೆದುಕೊಳ್ಳಬೇಕಾಗಿದೆ .ಏಕೆಂದರೆ ಅವರು ಈ ಪ್ರಕರಣದ ನಿಜವಾದ ಬಲಿಪಶು ಝಾಕಿಯಾ ಜಾಫ್ರಿ ಅವರ ಭಾವನೆಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಕೋರ್ಟ್ ಹೇಳಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries