ತಿರುವನಂತಪುರ: ಉತ್ತರ ಕೇರಳ ಕರಾವಳಿಯಿಂದ ದಕ್ಷಿಣ ಗುಜರಾತ್ ಕರಾವಳಿವರೆಗೆ ಕಡಿಮೆ ಒತ್ತಡದ ಪ್ರದೇಶ ವ್ಯಾಪಿಸಿದ್ದು, ಅರಬ್ಬಿ ಸಮುದ್ರದಲ್ಲಿ ಬೀಸುತ್ತಿರುವ ಬಲವಾದ ಗಾಳಿಯಿಂದಾಗಿ ಮುಂದಿನ ಐದು ದಿನಗಳ ಕಾಲ ಕೇರಳದಲ್ಲಿ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶುಕ್ರವಾರ ಮತ್ತು ಶನಿವಾರ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಗಂಟೆಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.