ಹೈದರಾಬಾದ್: ಬಾಲಿವುಡ್ ನಟ ಸಲ್ಮಾನ್ ಖಾನ್ ತಮ್ಮ ಮುಂಬರುವ ಸಿನಿಮಾವೊಂದರ ಶೂಟಿಂಗ್‌ಗಾಗಿ ಹೈದರಾಬಾದ್‌ಗೆ ಆಗಮಿಸಿದ್ದರು. ಈ ವೇಳೆ ಗ್ರೀನ್ ಇಂಡಿಯಾ ಚಾಲೆಂಜ್ ನಲ್ಲಿ ಭಾಗವಹಿಸುವ ಮೂಲಕ ಗಮನ ಸೆಳೆದರು.
ಹೈದರಾಬಾದ್: ಬಾಲಿವುಡ್ ನಟ ಸಲ್ಮಾನ್ ಖಾನ್ ತಮ್ಮ ಮುಂಬರುವ ಸಿನಿಮಾವೊಂದರ ಶೂಟಿಂಗ್‌ಗಾಗಿ ಹೈದರಾಬಾದ್‌ಗೆ ಆಗಮಿಸಿದ್ದರು. ಈ ವೇಳೆ ಗ್ರೀನ್ ಇಂಡಿಯಾ ಚಾಲೆಂಜ್ ನಲ್ಲಿ ಭಾಗವಹಿಸುವ ಮೂಲಕ ಗಮನ ಸೆಳೆದರು.
ರಾಜ್ಯಸಭಾ ಸಂಸದ ಮತ್ತು ಗ್ರೀನ್ ಇಂಡಿಯಾ ಸಂಸ್ಥಾಪಕ ಜೆ.ಸಂತೋಷ್ ಕುಮಾರ್ ಅವರೊಂದಿಗೆ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಸಸಿಗಳನ್ನು ನೆಡುವ ಮೂಲಕ ಅಭಿಯಾನಕ್ಕೆ ಸಾಥ್ ಕೊಟ್ಟರು.
ಗ್ರೀನ್ ಇಂಡಿಯಾ ಚಾಲೆಂಜ್ ಅಭಿಯಾನದ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದ ಸಲ್ಲು, ಗಿಡ ನೆಡುವ ಕಾರ್ಯಕ್ರಮದ ಜವಾಬ್ದಾರಿಯನ್ನು ಈ ನೆಲದ ಪ್ರತಿಯೊಬ್ಬ ವ್ಯಕ್ತಿಯೂ ವಹಿಸಿಕೊಳ್ಳಬೇಕು. ದೊಡ್ಡ ಮರಗಳನ್ನು ಬೆಳೆಸುವವರೆಗೆ ಆ ಸಸಿಗಳನ್ನು ಸಮರ್ಪಕವಾಗಿ ಆರೈಕೆ ಮಾಡಬೇಕು ಎಂದು ಹೇಳಿದರು. ಗ್ರೀನ್ ಇಂಡಿಯಾ ಚಾಲೆಂಜ್ ಸೇರಲು ಮತ್ತು ದೊಡ್ಡ ಪ್ರಮಾಣದಲ್ಲಿ ಸಸಿಗಳನ್ನು ನೆಡಲು ತಮ್ಮ ಅಭಿಮಾನಿಗಳಿಗೆ ಕರೆ ಕೊಟ್ಟರು.