ತಿರುವನಂತಪುರ: ರಾಜ್ಯದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯಾಗುವ ಸಂಭವವಿರುವುದರಿಂದ ಜನರು ಜಾಗೃತರಾಗಿರಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.
ತಿರುವನಂತಪುರಂ, ಕೊಲ್ಲಂ, ಇಡುಕ್ಕಿ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆ ಪ್ರಕಾರ, ಈ ಪ್ರದೇಶದಲ್ಲಿ 24 ಗಂಟೆಗಳಲ್ಲಿ 65 ರಿಂದ 115.5 ಮಿಮೀ ಮಳೆಯಾಗುತ್ತದೆ.
ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ನಾಳೆಯೂ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಇಡುಕ್ಕಿ, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆಯೊಂದಿಗೆ ಜೋರಾದ ಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.