HEALTH TIPS

ಜಾಮಾ ಮಸೀದಿಯಿಂದ ಪ್ರತಿಭಟನೆಗೆ ಕರೆ ಕೊಟ್ಟಿಲ್ಲ: ಶಾಹಿ ಇಮಾಮ್ ಸ್ಪಷ್ಟನೆ

 ನವದೆಹಲಿ: ನೂಪುರ್ ಶರ್ಮಾ ಬಂಧನಕ್ಕೆ ಒತ್ತಾಯಿಸಿ ಜಾಮಾ ಮಸೀದಿ ಬಳಿ ನಡೆಯುತ್ತಿರುವ ಪ್ರತಿಭಟನೆಗೆ ಮಸೀದಿ ವತಿಯಿಂದ ಕರೆ ಕೊಟ್ಟಿಲ್ಲ ಎಂದು ಜಾಮಾ ಮಸೀದಿಯ ಶಾಹಿ ಇಮಾಮ್ ತಿಳಿಸಿರುವುದಾಗಿ ಎಎನ್‌ಐ ಟ್ವೀಟ್ ಮಾಡಿದೆ.

ಪ್ರವಾದಿ ಮಹಮ್ಮದ್ ಕುರಿತಂತೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಅಮಾನತುಗೊಂಡಿರುವ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸಿ ಶುಕ್ರವಾರ ನಮಾಜ್ ಬಳಿಕ ಮಸೀದಿ ಹೊರಗೆ ಸೇರಿದ್ದ ನೂರಾರು ಮಂದಿ ಪ್ರತಿಭಟನೆ ನಡೆಸಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮಸೀದಿಯ ಶಾಹಿ ಇಮಾಮ್, 'ಅಲ್ಲಿ ಪ್ರತಿಭಟನೆ ಮಾಡುತ್ತಿರುವವರು ಯಾರೆಂದು ನಮಗೆ ತಿಳಿದಿಲ್ಲ. ಅವರು ಎಐಎಂಐಎಂ ಪಕ್ಷದವರು ಅಥವಾ ಓವೈಸಿ ಬೆಂಬಲಿಗರಿರಬಹುದು. ಅವರು ಪ್ರತಿಭಟನೆ ಮಾಡುವುದಿದ್ದರೆ ಮಾಡಲಿ. ಆದರೆ, ನಾವು ಅದನ್ನು ಬೆಂಬಲಿಸುವುದಿಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸುತ್ತಿದ್ದೇನೆ' ಎಂದು ಶಾಹಿ ಇಮಾಮ್ ಹೇಳಿರುವುದಾಗಿ ಎಎನ್‌ಐ ಟ್ವೀಟಿಸಿದೆ.

ಈ ಮಧ್ಯೆ, ಪ್ರತಿಭಟನಾಕಾರರನ್ನು ಚದುರಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ದ್ವೇಷ ಹರಡುವಿಕೆ ಮತ್ತು ಧಾರ್ಮಿಕ ಭಾವನೆಗೆ ಧಕ್ಕೆ ಆರೋಪದಡಿ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ವಿವಾದಿತ ಅರ್ಚಕ ಯತಿ ನರಸಿಂಗಾನಂದ್ ಸೇರಿ 31 ಜನರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ನೂಪುರ್ ಶರ್ಮಾ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ.

ನೂಪುರ್ ಶರ್ಮಾ ಹೇಳಿಕೆ ಖಂಡಿಸಿ ಗಲ್ಫ್ ರಾಷ್ಟ್ರಗಳಿಂದ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಭಾರತೀಯ ಉತ್ಪನ್ನಗಳಿಗೂ ನಿಷೇಧ ಹೇರಿ ಪ್ರತಿಭಟನೆ ನಡೆಸಲಾಗಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries