ಕುಂಬಳೆ: ಕಣಿಪುರ ಶ್ರೀಗೋಪಾಲಕೃಷ್ಣ ದೇವಾಲಯದ ಜೀರ್ಣೋದ್ದಾರ ಪ್ರಕ್ರಿಯೆಯ ಅಂಗವಾಗಿ ಉಪದೇವತೆಗಳ ಬಾಲಾಲಯ ಪ್ರತಿಷ್ಠೆ ಗುರುವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಶ್ರೀಕ್ಷೇತ್ರದ ತಂತ್ರಿವರ್ಯ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳು ವಿಧಿ ವಿಧಾನಗಳ ನೇತೃತ್ವ ವಹಿಸಿದ್ದು ಸಾಮೂಹಿಕ ಪ್ರಾರ್ಥನೆಗಳೊಂದಿಗೆ ಉಪದೇವತೆಗಳ ಪ್ರತಿಷ್ಠೆ ನೆರವೇರಿತು. ಜೀರ್ಣೋದ್ದಾರ ಸಮಿತಿ ಪದಾಧಿಕಾರಿಗಳು, ಶ್ರೀಕ್ಷೇತ್ರದ ಆಡಳಿತಾಧಿಕಾರಿಗಳು, ಸಿಬ್ಬಂದಿಗಳು, ಊರ-ಪರವೂರು ಭಕ್ತಾದಿಗಳು ಉಪಸ್ಥಿತರಿದ್ದರು.