ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಕಚೇರಿ ಸಮುಚ್ಛಯ ಹಾಗೂ ವಸತಿಗೃಹದ ಶಿಲಾನ್ಯಾಸ ಸಮಾರಂಭ ದೇವಸ್ಥಾನ ವಠಾರದಲ್ಲಿ ಜರಗಿತು.
ಮಲಬಾರ್ ದೇವಸ್ವಂ ಮಂಡಳಿ ಅಧ್ಯಕ್ಷ, ಎಂ.ಆರ್ ಮುರಳಿ ನೂತನ ಕಟ್ಟಡ ಶಿಲಾನ್ಯಾಸದ ಶಿಲಾಫಲಕ ಅನಾವರಣಗೊಳಿಸಿದರು. ದೇವಸ್ಥಾನದ ಮುಖ್ಯ ಅರ್ಚಕ ಶ್ರೀಕೃಷ್ಣ ಉಪಾಧ್ಯಾಯ, ದೇವಸ್ಥಾನ ನವೀಕರಣ ಸಮಿತಿ ಅಧ್ಯಕ್ಷ ಯು.ತಾರಾನಾಥ ಆಳ್ವ, ಪ್ರಧಾನ ಕಾರ್ಯದರ್ಶಿ ಜಯದೇವ ಖಂಡಿಗೆ, ಡಾ. ಬಿ;.ಎಸ್ ರಾವ್, ಮಧೂರು ಗ್ರಾಮ ಪಂಚಾಯಿತಿಅ ಧ್ಯಕ್ಷ ಕೆ. ಗೋಪಾಲಕೃಷ್ಣ, ಉಪಾಧ್ಯಕ್ಷೆ ಸ್ಮಿಜಾ ಮುಂತಾದವರು ಉಪಸ್ಥಿತರಿದ್ದರು.