ತಿರುವನಂತಪುರ: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ತರಗತಿ ಮೊಟಕುಗೊಳಿಸಿ ಯಾವುದೇ ಕಾರ್ಯಕ್ರಮಗಳಲ್ಲಿ ಮಕ್ಕಳು ಭಾಗವಹಿಸಬಾರದು ಎಂದು ಸಾರ್ವಜನಿಕ ಶಿಕ್ಷಣ ಸಚಿವ ವಿ.ಶಿವಂ ಕುಟ್ಟಿ ಹೇಳಿರುರು. ಶಿಕ್ಷಕರು ಮತ್ತು ಶಾಲಾ ಅಧಿಕಾರಿಗಳು, ರಕ್ಷಕ ಶಿಕ್ಷಕ ಸಂಘ ಈ ಬಗ್ಗೆ ವಿಶೇಷ ಗಮನ ಹರಿಸಬೇಕು ಎಂದು ಸಚಿವರು ಸೂಚಿಸಿದರು. ರಾಜ್ಯದ ಹಲವು ಶಾಲೆಗಳಲ್ಲಿ ತರಗತಿ ವೇಳೆ ಮಕ್ಕಳು ಬೇರೆ ಚಟುವಟಿಕೆಗಳಲ್ಲಿ ತೊಡಗಿರುವುದು ಗಮನಕ್ಕೆ ಬಂದಿದೆ. ಇದು ಸರಿಯಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ತರಗತಿ ಅಧ್ಯನದ ಮೇಲೆ ಪರಿಣಾಮ ಬೀರದ ರೀತಿಯಲ್ಲಿ ಏರ್ಪಡಿಸಬೇಕು ಎಂದು ಸಚಿವ ವಿ.ಶಿವಕುಟ್ಟಿ ಹೇಳಿದರು.
ಶಾಲಾ ವಿದ್ಯಾರ್ಥಿಗಳು ತರಗತಿ ಮೊಟಕುಗೊಳಿಸಿ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸಬಾರದು: ಶಿಕ್ಷಣ ಸಚಿವ ವಿ.ಶಿವಂಕುಟ್ಟಿ
0
ಜೂನ್ 23, 2022
Tags