HEALTH TIPS

'ಅಗ್ನಿಪಥ ಯೋಜನೆ'ಯನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ: ಉನ್ನತ ಮಿಲಿಟರಿ ಅಧಿಕಾರಿ ಅನಿಲ್ ಪುರಿ

 ನವದೆಹಲಿ: ಕೇಂದ್ರ ರಕ್ಷಣಾ ಸಚಿವಾಲಯ ತಂದಿರುವ ಭಾರತೀಯ ಮಿಲಿಟರಿಗೆ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಯಾವುದೇ ಕಾರಣಕ್ಕೂ ಹಿಂತೆಗೆದುಕೊಳ್ಳುವುದಿಲ್ಲ. ದೇಶದ ಯುವಶಕ್ತಿಯನ್ನು ಹೆಚ್ಚಿಸಲು ಇರುವ ಏಕೈಕ ಪ್ರಗತಿಪರ ಹೆಜ್ಜೆ ಎಂದು ದೇಶಾದ್ಯಂತ ಯೋಜನೆಗೆ ಪ್ರತಿಭಟನೆ ತೀವ್ರವಾಗಿರುವ ಸಂದರ್ಭದಲ್ಲಿ ಸೇನೆಯ ಹಿರಿಯ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಭಾರತೀಯ ಭೂಸೇನೆ, ನೌಕಾಸೇನೆ ಮತ್ತು ವಾಯುಸೇನೆಯ ಹಿರಿಯ ಅಧಿಕಾರಿಗಳು ಇಂದು ದೆಹಲಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಕೇಂದ್ರ ಸರ್ಕಾರ ಕಳೆದ ಜೂನ್ 14ರಂದು ಮಿಲಿಟರಿಯಲ್ಲಿ ಯುವಕರನ್ನು ನೇಮಕಾತಿ ಮಾಡುವ ಅಗ್ನಿಪಥ್ ಯೋಜನೆಯನ್ನು ಜಾರಿಗೆ ತಂದಿದ್ದು, ವಾಯುಸೇನೆಗೆ ಜೂನ್ 24ರಂದು ನೇಮಕಾತಿ ಆರಂಭವಾಗಲಿದೆ.

ಈ ಮಧ್ಯೆ ಅಗ್ನಿಪಥ ಯೋಜನೆ ಮಿಲಿಟರಿಗೆ ಸೇರುವ ಯುವಕರಿಗೆ ಮಾರಕವಾಗಿದೆ, ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತದೆ ಎಂದು ಬಿಹಾರ, ಪಶ್ಚಿಮ ಬಂಗಾಳ, ಹೈದರಾಬಾದ್, ಸಿಕಂದರಾಬಾದ್, ತೆಲಂಗಾಣ, ಪಂಜಾಬ್, ಕೇರಳ ರಾಜ್ಯಗಳಲ್ಲಿ ತೀವ್ರವಾಗಿ ಸಾವು ನೋವುಗಳು ಸಂಭವಿಸಿವೆ. ರೈಲು, ಬಸ್ಸು ಸೇರಿದಂತೆ ಸಾರ್ವಜನಿಕ ಆಸ್ತಿಪಾಸ್ತಿಗಳು ಪ್ರತಿಭಟನೆ, ಹಿಂಸಾಚಾರದಲ್ಲಿ ಹಾನಿಗೀಡಾಗಿವೆ.

ಈ ಎಲ್ಲದರ ಮಧ್ಯೆ ಇಂದು ದೆಹಲಿಯಲ್ಲಿ ಭಾರತೀಯ ನೌಕಾಪಡೆ ಮತ್ತು ವಾಯುಪಡೆಯ ಅಧಿಕಾರಿಗಳೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಿಲಿಟರಿ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ, ಅಗ್ನಿಪಥ್ ಯೋಜನೆಯನ್ನು ಏಕೆ ಹಿಂತೆಗೆದುಕೊಳ್ಳಬೇಕು. ದೇಶವನ್ನು ಯುವಶಕ್ತಿಯನ್ನಾಗಿಸಲು ಅದೊಂದೇ ಪ್ರಗತಿಪರ ಹೆಜ್ಜೆಯಾಗಿದೆ. ದೇಶದ ಭದ್ರತೆ ದೃಷ್ಟಿಯಿಂದ ಈ ಯೋಜನೆ ಮುಖ್ಯವಾಗಿದೆ. ನಮ್ಮ ದೇಶದ ಅತಿ ಎತ್ತರದ ಪ್ರದೇಶಗಳಲ್ಲಿ ನೇಮಕಗೊಂಡಿರುವ ಮಿಲಿಟರಿ ಸಿಬ್ಬಂದಿಗಳು ಅನಾರೋಗ್ಯ ಕಾರಣದಿಂದ ಎಷ್ಟು ಮಂದಿ ಸಾಯುತ್ತಾರೆ ಎಂದು ನಿಮಗೆ ಗೊತ್ತಿದೆಯೇ, ಅದರ ಬಗ್ಗೆ ತಿಳಿದುಕೊಳ್ಳಿ ಆಗ ನಿಮಗೆ ಮಿಲಿಟರಿಯಲ್ಲಿ ಯುವಕರ ಅಗತ್ಯ ಎಷ್ಟಿರುತ್ತದೆ ಎಂಬುದು ಗೊತ್ತಾಗುತ್ತದೆ ಎಂದರು.

ನೇಮಕಾತಿ ಪ್ರಕ್ರಿಯೆಗೆ ಪ್ರಮಾಣಪತ್ರ ಕಡ್ಡಾಯ: ಮಿಲಿಟರಿ ಪಡೆಗೆ ಸೇರಲಿಚ್ಛಿಸುವ ಯುವಕರು ತಾವು ಪ್ರತಿಭಟನೆ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟದಲ್ಲಿ ಭಾಗಿಯಾಗಿರಲಿಲ್ಲ ಎಂದು ಶೇಕಡಾ 100ರಷ್ಟು ಪೊಲೀಸ್ ಪರಿಶೀಲನೆಯೊಂದಿಗೆ ಪ್ರಮಾಣಪತ್ರವನ್ನು ನೀಡಬೇಕಾಗುತ್ತದೆ ಎಂದು ಸಹ ಹೇಳಿದರು.

ಭಾರತೀಯ ಸೇನೆಯ ಅಡಿಪಾಯ ಶಿಸ್ತು. ಬೆಂಕಿ ಹಚ್ಚುವುದು, ವಿಧ್ವಂಸಕ ಕೃತ್ಯಗಳಿಗೆ ಇಲ್ಲಿ ಜಾಗವಿಲ್ಲ. ಪ್ರತಿಯೊಬ್ಬ ವ್ಯಕ್ತಿಯು ಪ್ರತಿಭಟನೆ ಅಥವಾ ವಿಧ್ವಂಸಕ ಕೃತ್ಯದ ಭಾಗವಾಗಿಲ್ಲ ಎಂದು ಪ್ರಮಾಣಪತ್ರವನ್ನು ತೋರಿಸಬೇಕಾಗುತ್ತದೆ. ಪೊಲೀಸ್ ಪ್ರಮಾಣಪತ್ರ ನೂರಕ್ಕೆ ನೂರು ಸರಿಯಾಗಿರುತ್ತದೆ. ಪ್ರಮಾಣಪತ್ರ ಇಲ್ಲದಿದ್ದರೆ ಸೇನೆ ಸೇರಲು ಸಾಧ್ಯವಿಲ್ಲ ಎಂದು ತಿಳಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries