ನವದೆಹಲಿ: ವಾಣಿಜ್ಯ ಬಳಕೆ ಸಿಲಿಂಡರ್ ದರ ಇಳಿಕೆಯಾಗಿದೆ. 19 ಕೆಜಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಪ್ರತಿ ಸಿಲಿಂಡರ್‌ಗೆ 135 ರೂಪಾಯಿ ಇಳಿಕೆಯಾಗಿದೆ.
ದೆಹಲಿಯಲ್ಲಿ ಇನ್ನು ಮುಂದೆ ವಾಣಿಜ್ಯ ಬಳಕೆ ಸಿಲಿಂಡರ್ ಹೆಲೆ 2 ಸಾವಿರದ 219 ರೂಪಾಯಿ, ಕೋಲ್ಕತ್ತಾದಲ್ಲಿ 2 ಸಾವಿರದ 322 ರೂಪಾಯಿ, ಮುಂಬೈನಲ್ಲಿ 2 ಸಾವಿರದ 171.50 ರೂಪಾಯಿ, ಚೆನ್ನೈನಲ್ಲಿ 2 ಸಾವಿರದ 373 ರೂಪಾಯಿಗಳಾಗಿದೆ. ಇಂದಿನಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.
ಮೇ 19 ರಂದು ಭಾರತದಲ್ಲಿ ಗೃಹೋಪಯೋಗಿ ಮತ್ತು ವಾಣಿಜ್ಯ ಬಳಕೆ ಎಲ್‍ಪಿಜಿ ಸಿಲಿಂಡರ್ ಗಳ ಬೆಲೆಯನ್ನು ಹೆಚ್ಚಿಸಲಾಗಿತು. ಒಂದೇ ತಿಂಗಳಲ್ಲಿ ಎರಡು ಬಾರಿ ಅಡುಗೆ ತೈಲದ ಬೆಲೆ ಹೆಚ್ಚಿಸಲಾಗಿತ್ತು. 14 ಕೆಜಿ ಗೃಹಬಳಕೆಯ ಸಿಲಿಂಡರ್ ದರವನ್ನು 3.50 ರೂಪಾಯಿ ಹೆಚ್ಚಿಸಲಾಗಿತ್ತು ಮತ್ತು 19 ಕೆಜಿಯ ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆಯನ್ನು 8 ರೂಪಾಯಿ ಹೆಚ್ಚಿಸಲಾಗಿತ್ತು.