ನವದೆಹಲಿ: ನಾಗರಿಕರಿಗೆ ಮೂಲಭೂತ ಹಕ್ಕುಗಳನ್ನು ಕಲ್ಪಿಸುವ ಸಲುವಾಗಿ ಜನಸಂಖ್ಯಾ ನಿಯಂತ್ರಣಕ್ಕೆ ಕಠಿಣ ಕಾನೂನು ಜಾರಿಗೊಳಿಸುವ ಕಾರ್ಯಸಾಧ್ಯತೆಯನ್ನು ಖಾತ್ರಿಪಡಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ಅಧ್ಯಾತ್ಮಿಕ ಪ್ರವಚನಕಾರ ದೇವಕಿನಂದನ್ ಠಾಕೂರ್ ಅವರು ಸಲ್ಲಿಸಿರುವ ಅರ್ಜಿಯಲ್ಲಿ 'ಜನಸಂಖ್ಯಾ ಸ್ಫೋಟವೇ ಎಲ್ಲ ಸಮಸ್ಯೆಗಳಿಗೆ ಮೂಲ ಕಾರಣವಾಗಿದೆ. ನಾಗರಿಕರಿಗೆ ಮೂಲಭೂತ ಹಕ್ಕುಗಳನ್ನು ಕಲ್ಪಿಸಲು ಜನಸಂಖ್ಯೆಯ ಸ್ಫೋಟ ನಿಯಂತ್ರಿಸುವ ಅವಶ್ಯಕತೆಯಿದೆ' ಎಂದು ಕೋರಿದ್ದಾರೆ.
ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ ನಿಯಂತ್ರಿಸಲು ಎರಡು ಮಕ್ಕಳ ನಿಯಮ ಸೇರಿ ಕೆಲವು ಅಗತ್ಯ ಕ್ರಮಗಳನ್ನು ಜಾರಿಗೆ ತರುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾದ ಅರ್ಜಿಯನ್ನು ವಜಾಗೊಳಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪೂರಕವಾಗಿ ಠಾಕೂರ್ ಈ ಅರ್ಜಿಯನ್ನು ಸಲ್ಲಿಸಿದ್ದಾರೆ.