ಮಂಜೇಶ್ವರ: ಮೀಂಜ ಗ್ರಾಮ ಪಂಚಾಯತಿ ಮಟ್ಟದ ಶಾಲಾ ಪ್ರವೇಶೋತ್ಸವ ಮಜಿಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯÀಲ್ಲಿ ಗ್ರಾ.ಪಂ. ಸದಸ್ಯೆ ಆಶಾಲತ ಬಿ.ಎಂ. ಅವರ ಅಧ್ಯಕ್ಷತೆಯಲ್ಲಿ ಜರಗಿತು. ನವಾಗತ ಮಕ್ಕಳಿಗೆ ಹೂ ಗುಚ್ಛವನ್ನು ನೀಡಿ ಶಾಲೆಗೆ ಸ್ವಾಗತಿಸಲಾಯಿತು. ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಮೀಂಜ ಪಂಚಾಯತಿ ಅಧ್ಯಕ್ಷೆ ಸುಂದರಿ.ಆರ್ ಶೆಟ್ಟಿ ಅವರು ಸರ್ಕಾರಿ ಶಾಲೆಗಳ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮಂಜೇಶ್ವರ ಬ್ಲಾಕ್ ಪಂಚಾಯತಿ ಉಪಾಧ್ಯಕ್ಷ ಹನೀಪ್ ಪಿ.ಕೆ, ಮೀಂಜ ಗ್ರಾಮ ಪಂಚಾಯತಿ ಆರೋಗ್ಯ ಮತ್ತು ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷೆ ಸರಸ್ವತಿ, ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷೆ ರುಕ್ಯಾ ಸಿದ್ದೀಕ್, ಕ್ಷೇಮಾಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷ ಬಾಬು, ವಾರ್ಡು ಸದಸ್ಯೆ ಮಿಸಿರಿಯಾ, ವಾರ್ಡಿನ ಮಾಜಿ ಸದಸ್ಯ ಶಾಂತರಾಮ ಶೆಟ್ಟಿ, ಬ್ಲಾಕ್ ಪಂಚಾಯತಿ ಮಾಜಿ ಸದಸ್ಯ ಪ್ರಭಾಕರ ಶೆಟ್ಟಿ, ಪಿ.ಇ.ಸಿ ಕಾರ್ಯದರ್ಶಿ ಸತ್ಯನಾರಾಯಣ ಶರ್ಮ, ಮಜಿಬೈಲು ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಕಮಲ ಮತ್ತು ಹೇಮಲತ, ನಿವøತ್ತ ಉಪಜಿಲ್ಲಾ ಶಿಕ್ಷಣಾಧಿಕಾರಿ ಯಮ್.ಜಿ.ನಾರಾಯಣ ರಾವ್, ಶಾಲಾ ನಿರ್ವಾಹಕ ಸಮಿತಿ ಅಧ್ಯಕ್ಷೆ ಆಶಾಲತ ಆಳ್ವ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ದಿನೇಶ ಮಜಿಬೈಲು, ಉಮ್ಮರ್ ಹಾಜಿ ಮೊದಲಾದವರು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಜಿಬೈಲು ಸೇವಾ ಸಹಕಾರಿ ಬ್ಯಾಂಕ್ ವತಿಯಿಂದ ಒಂದನೇ ತರಗತಿಯ ಮಕ್ಕಳಿಗೆ ಬ್ಯಾಗ್ ವಿತರಿಸಲಾಯಿತು.