ಬದಿಯಡ್ಕ: ರಾಷ್ಟ್ರೀಯ ಸಿರಿಗನ್ನಡ ಪರಿಷತ್ತು ಕಾಸರಗೋಡು ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕರ್ನಾಟಕ ಸರ್ಕಾರದ ಸಹಕಾರದೊಂದಿಗೆ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಜೂ.26 ರಂದು ಭಾನುವಾರ ಅಪರಾಹ್ನ 2.30 ರಿಂದ ಶ್ರೀಮದ್ ಎಡನೀರು ಮಠದ ಸಭಾಂಗಣದಲ್ಲಿ ಹೊರನಾಡ ಕನ್ನಡ ಸಿರಿ ಉತ್ಸವ ವಿನೂತನ ಕಾರ್ಯಕ್ರಮ ಆಯೋಜಿಸಲಾಗಿದೆ.
ಸಮಾರಂಭವನ್ನು ಶ್ರೀಮದ್ ಎಡನೀರು ಮಠಾಧೀಶ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳು ದೀಪ ಬೆಳಗಿಸಿ ಚಾಲನೆ ನೀಡುವರು. ಖ್ಯಾತ ನ್ಯಾಯವಾದಿ ಎಂ.ನಾರಾಯಣ ಭಟ್ ಅಧ್ಯಕ್ಷತೆ ವಹಿಸುವರು. ಶ್ರೀಮಠದ ಪ್ರಬಂಧಕ ರಾಜೇಂದ್ರ ಕಲ್ಲೂರಾಯ, ಕರ್ನಾಟಕ ಜಾನಪದ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಪಮ್ಮಿ ಕೊಡಿಯಾಲಬೈಲು, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಜೋಗಿಲ ಸಿದ್ದರಾಜು ತುಳು ವಲ್ರ್ಡ್ ಸ್ಥಾಪಕ ರಾಜೇಶ್ ಆಳ್ವ ಬದಿಯಡ್ಕ ಅತಿಥಿಗಳಾಗಿ ಉಪಸ್ಥಿತರಿರುವರು. ಈ ಸಂದರ್ಭ ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಗಳ ಪ್ರಬಂಧಕ ಜಯದೇವ ಖಂಡಿಗೆ, ಸಾಮಾಜಿಕ ಮುಂದಾಳು ಗೋಪಾಲ ಶೆಟ್ಟಿ ಅರಿಬೈಲು, ಉದ್ಯಮಿ ರಾಮ ಪ್ರಸಾದ್ ಕಾಸರಗೋಡು, ನಿವೃತ್ತ ಪ್ರಾಧ್ಯಾಪಕ ಪ್ರೊ.ಎ.ಶ್ರೀನಾಥ್, ನಿವೃತ್ತ ತಹಶೀಲ್ದಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು. ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕøತಿಕ ಸಂಘ ಕಾಸರಗೋಡು ಇದರ ಅ|ಧ್ಯಕ್ಷೆ ಡಾ.ವಾಣಿಶ್ರೀ ತಂಡದವರಿಂದ ಸಾಂಸ್ಕøತಿಕ ವೈಭವ, ಜೋಗಿಲ ಸಿದ್ದರಾಜು ತಂಡದವರಿಂದ ಸುಗಮ ಸಂಗೀತ, ವಿದುಷಿಃ ಉಷಾ ಬಸಪ್ಪ ಮತ್ತು ಬಳಗದವರಿಂದ ಶಾಸ್ತ್ರೀಯ ನೃತ್ಯ ಪ್ರದರ್ಶನಗಳು ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.