HEALTH TIPS

ಆಸ್ಟ್ರೇಲಿಯಾ ಉಪಪ್ರಧಾನಿಯಿಂದಲೂ ಯೋಗ ಪ್ರದರ್ಶನ: ಟ್ವೀಟ್​ ಮಾಡಿ ಫೋಟೋ ಹಂಚಿಕೊಂಡ ರಿಚರ್ಡ್​

 ನವದೆಹಲಿ: ಭಾರತ ಪ್ರವಾಸದಲ್ಲಿರುವ ಆಸ್ಟ್ರೇಲಿಯಾದ ರಕ್ಷಣಾ ಸಚಿವ ರಿಚರ್ಡ್​​ ಮಾರ್ಲೆಸ್​ ಅವರು ಯೋಗ ಮಾಡುವ ಮೂಲಕ ವಿಶ್ವ ಯೋಗ ದಿನಾಚರಣೆಗೆ ಕೈ ಜೋಡಿಸಿದ್ದಾರೆ.

ಮಂಗಳವಾರ ಮುಂಜಾನೆಯೇ ಯೋಗ ಮಾಡಿದ್ದು, ಈ ಬಗ್ಗೆ ಟ್ವಿಟ್ಟರ್​​ನಲ್ಲಿ ಫೋಟೋ ಸಮೇತ ಹಂಚಿಕೊಂಡಿದ್ದಾರೆ.


ಇಂದು ಯೋಗದಿಂದ ದಿನವನ್ನು ಪ್ರಾರಂಭಿಸಿದ್ದೇನೆ. ಈ ಮೂಲಕ ಉಭಯ ರಾಷ್ಟ್ರಗಳ ಸ್ನೇಹಪೂರ್ವ ಮಾತುಕತೆಗೆ ಸಜ್ಜಾಗುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇಂದು ಸಂಜೆ ಉಭಯ ನಾಯಕರು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಆಸ್ಟ್ರೇಲಿಯಾದ ಉಪಪ್ರಧಾನಿಯೂ ಆಗಿರುವ ರಿಚರ್ಡ್​ ಮಾರ್ಲೆಸ್​​ ಅವರಿಗೆ, ನೀವು ಯೋಗ ಮಾಡಿರುವುದನ್ನು ನೋಡಿ ತುಂಬಾ ಸಂತಸವಾಗಿದೆ. ನಿಮ್ಮ ಭೇಟಿಗಾಗಿ ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries