ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರು ಶುಕ್ರವಾರ ತಜ್ಞರೊಂದಿಗೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರು ಶುಕ್ರವಾರ ತಜ್ಞರೊಂದಿಗೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಭೆಯಲ್ಲಿ ಏಮ್ಸ್ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ, ಐಸಿಎಂಆರ್ ಮಹಾ ನಿರ್ದೇಶಕ ಬಲರಾಂ ಭಾರ್ಗವ ಮತ್ತು ಎನ್‌ಸಿಡಿಸಿ ನಿರ್ದೇಶಕ ಸುಜೀತ್ ಸಿಂಗ್ ಭಾಗವಹಿಸಲಿದ್ದಾರೆ.
ಭಾರತದಲ್ಲಿ ಕಳೆದ ಕೆಲವು ವಾರಗಳಿಂದ ಕೋವಿಡ್ ಸೋಂಕು ಪ್ರಮಾಣ ಏರುಮುಖವಾಗಿದೆ. ಕರ್ನಾಟಕ, ಮಹಾರಾಷ್ಟ್ರ, ಕೇರಳ ದೆಹಲಿ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 1000ಕ್ಕಿಂತ ಹೆಚ್ಚಿದೆ.