ಕಾಸರಗೋಡು: ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಪೂರ್ವಭಾವಿಯಾಗಿ ಮಾದಕ ವಸ್ತು ವಿರೋಧಿ ಜಾಗೃತಿಯೊಂದಿಗೆ ಜಿಲ್ಲಾ ಪೆÇಲೀಸ್ ಕ್ರಿಕೆಟ್ ಪಂದ್ಯಾವಳಿ ಕಾಞಂಗಾಡ್ ಮಾವುಂಗಲ್ ಮೈದಾನದಲ್ಲಿ ನಡೆಯಿತು.
ಉದ್ಘಾಟನಾ ಪಂದ್ಯದಲ್ಲಿ ನೀಲೇಶ್ವರ ಪೆÇಲೀಸ್ ಠಾಣೆ ಹಾಗೂ ಕಾಸರಗೋಡು ಸಂಚಾರ ಠಾಣೆ ನಡುವೆ ಸ್ಪರ್ಧೆ ನಡೆಯಿತು. ಯುವಕರಲ್ಲಿ ಹೆಚ್ಚುತ್ತಿರುವ ಮಾದಕದ್ರವ್ಯ ಬಳಕೆ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪೆÇಲೀಸರೊಂದಿಗೆ ಯುವಕರನ್ನೂ ಸೇರ್ಪಡೆಗೊಳಿಸಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಜೂನ್ 26ರಂದು ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆಯಂದು ಫೈನಲ್ ಒಂದ್ಯಾಟ ಕಾಸರಗೋಡಿನಲ್ಲಿ ಜರುಗಲಿದೆ.
ಅಜನೂರು ಪಂಚಾಯಿತಿ ಉಪಾಧ್ಯಕ್ಷ ಕೆ.ಸಬೀಶ್ ಪಂದ್ಯಾವಳಿ ಉದ್ಘಾಟಿಸಿದರು. ಹೊಸದುರ್ಗ ಪೆÇಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಕೆ.ಪಿ.ಸತೀಶ್ ಅಧ್ಯಕ್ಷತೆ ವಹಿಸಿದ್ದರು. ಕಾಞಂಗಾಡ್ ಡಿವೈಎಸ್‍ಪಿ ಬಾಲಕೃಷ್ಣನ್ ಮುಖ್ಯ ಅತಿಥಿಯಾಗಿದ್ದರು. ನೀಲೇಶ್ವರ ಪೆÇಲೀಸ್ ಠಾಣೆ ಇನ್ಸ್ ಪೆಕ್ಟರ್ ಕೆ.ಪಿ.ಶ್ರೀಹರಿ, ಸಬ್ ಇನ್ಸ್ ಪೆಕ್ಟರ್ ಆರ್.ಶರತ್, ಕಾಸರಗೋಡು ಜಿಲ್ಲಾ ಪೆÇಲೀಸ್ ಸಂಘದ ಉಪಾಧ್ಯಕ್ಷ ಟಿ.ವಿ.ಪ್ರಮೋದ್, ಹಿರಿಯ ಸಿವಿಲ್ ಪೆÇಲೀಸ್ ಅಧಿಕಾರಿ ಪ್ರಮೋದ್ ಕುಮಾರ್, ಜನಮೈತ್ರಿ ಬೀಟ್ ಅಧಿಕಾರಿಗಳಾದ ಪ್ರದೀಪನ್ ಕೊತ್ತೋಳಿ, ರಂಜಿತ್ ಕುಮಾರ್ ಮಾತನಾಡಿದರು.