ಗುವಾಹಟಿ: ಮಹಾ ವಿಕಾಸ್ ಅಘಾಡಿ ನೇತೃತ್ವದ ಸರ್ಕಾರದ ವಿರುದ್ಧ ಬಂಡೆದ್ದಿರುವ ಸಚಿವ ಏಕನಾಥ್ ಶಿಂಧೆ ಸುಮಾರು 40 ಶಾಸಕರ ಜೊತೆ ಇಲ್ಲಿನ ಸ್ಟಾರ್ ಹೋಟೆಲ್‌ವೊಂದರಲ್ಲಿ ಬೀಡು ಬಿಟ್ಟಿದ್ದಾರೆ.
ಗುವಾಹಟಿ: ಮಹಾ ವಿಕಾಸ್ ಅಘಾಡಿ ನೇತೃತ್ವದ ಸರ್ಕಾರದ ವಿರುದ್ಧ ಬಂಡೆದ್ದಿರುವ ಸಚಿವ ಏಕನಾಥ್ ಶಿಂಧೆ ಸುಮಾರು 40 ಶಾಸಕರ ಜೊತೆ ಇಲ್ಲಿನ ಸ್ಟಾರ್ ಹೋಟೆಲ್‌ವೊಂದರಲ್ಲಿ ಬೀಡು ಬಿಟ್ಟಿದ್ದಾರೆ.
ಶಿವಸೇನಾದ ಬಂಡಾಯ ಶಾಸಕರು ಅಸ್ಸಾಂ ತೊರೆಯುವಂತೆ ಒತ್ತಾಯಿಸಿ ಅಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಹೋಟೆಲ್ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು 'ಪಿಟಿಐ' ಟ್ವೀಟ್ ಮಾಡಿದೆ.
'ಅಸ್ಸಾಂ ರಾಜ್ಯವು ಭೀಕರ ಪ್ರವಾಹದಿಂದ ತತ್ತರಿಸುತ್ತಿದೆ. ಇಂತಹ ಸಂದರ್ಭದಲ್ಲಿ ಶಿವಸೇನಾ ಬಂಡಾಯ ಶಾಸಕರು ಇಲ್ಲಿರುವುದು ಸೂಕ್ತವಲ್ಲ. ಅವರು ರಾಜ್ಯವನ್ನು ತೊರೆಯಬೇಕು' ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಮಹಾರಾಷ್ಟ್ರದಲ್ಲಿನ ಬಲಾಬಲ
288 ಸದಸ್ಯರನ್ನು ಒಳಗೊಂಡಿರುವ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಿವಸೇನಾ 55 ಶಾಸಕರ ಬಲ ಹೊಂದಿದೆ. ಎನ್‌ಸಿಪಿ 53, ಕಾಂಗ್ರೆಸ್‌ನ 44, ಬಹುಜನ ವಿಕಾಸ ಆಘಾಡಿ 3, ಸಮಾಜವಾದಿ ಪಕ್ಷ, ಎಐಎಂಐಎಂ ಹಾಗೂ ಪ್ರಹಾರ್ ಜನಶಕ್ತಿ ಪಾರ್ಟಿಯ ತಲಾ ಇಬ್ಬರು ಶಾಸಕರಿದ್ದಾರೆ.
ಎಂಎನ್‌ಎಸ್, ಸಿಬಿಐ-ಎಂ, ಪಿಡಬ್ಲ್ಯುಪಿ, ಸ್ವಾಭಿಮಾನಿ ಪಕ್ಷ, ರಾಷ್ಟ್ರೀಯ ಸಮಾಜ ಪಾರ್ಟಿ, ಜನಸೂರ್ಯ ಶಕ್ತಿ ಪಾರ್ಟಿ ಹಾಗೂ ಕ್ರಾಂತಿಕಾರಿ ಶೆತಕರಿ ಪಕ್ಷದಿಂದ ತಲಾ ಒಬ್ಬರು ಶಾಸಕರಿದ್ದಾರೆ. 13 ಮಂದಿ ಪಕ್ಷೇತರ ಶಾಸಕರು ಹಾಗೂ ವಿರೋಧ ಪಕ್ಷ ಬಿಜೆಪಿಯಲ್ಲಿ 106 ಶಾಸಕರಿದ್ದಾರೆ.