ಮುಂಬೈ: ಪ್ರವಾದಿ ಮೊಹಮ್ಮದ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರಿಗೆ ಮುಂಬೈ ಪೊಲೀಸರು ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟಿವಿ ಚರ್ಚೆಯೊಂದರಲ್ಲಿ ಪ್ರವಾದಿ ಕುರಿತು ಅವರು ಮಾಡಿದ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಹೀಗಾಗಿ ನೂಪುರ್ ಶರ್ಮಾ ವಿರುದ್ಧ ಮುಂಬೈನ ಪೈದೋನಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಪ್ರಕರಣದಲ್ಲಿ ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಪೊಲೀಸರು ಬಯಸಿದ್ದು, ಜೂನ್ 25ರಂದು ಬೆಳಗ್ಗೆ 11 ಗಂಟೆಗೆ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ತಿಳಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇದಕ್ಕೂ ಮುನ್ನ ಪೊಲೀಸರು ಸಂಬಂಧಪಟ್ಟ ಸುದ್ದಿ ವಾಹಿನಿಯಿಂದ ಚರ್ಚೆಯ ವಿಡಿಯೋವನ್ನು ಕೇಳಿದ್ದಾರೆ.
ಇದೇ ರೀತಿ ಟ್ವೀಟ್ ಮಾಡಿದ್ದ ಶರ್ಮಾ ಮತ್ತು ಮತ್ತೊಬ್ಬ ನಾಯಕ ನವೀನ್ ಜಿಂದಾಲ್ ಅವರನ್ನು ಬಿಜೆಪಿ ಅಮಾನತು ಮಾಡಿದೆ.