ಪೆರ್ಲ: ಭಾರತ ಸ್ವಾತಂತ್ರ್ಯದ ಅಮೃತಮಹೋತ್ಸವದ ಸವಿನೆನಪಿಗಾಗಿ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಆಶ್ರಯದಲ್ಲಿ ಕಾಸರಗೋಡಿನ ಶ್ರೀರಾಮನಾಥ ಸಾಂಸ್ಕøತಿಕ ಭವನ ಸಮಿತಿ ವತಿಯಿಂದ ಗಡಿನಾಡ ಸಾಂಸ್ಕøತಿಕ ಉತ್ಸವ ಇಂದು(ಜೂನ್ 11) ಬೆಳಗ್ಗೆ 8.30ರಿಂದ ಪೆರ್ಲ ಸನಿಹದ ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರೀ(ಉಳ್ಳಾಲ್ತಿ)ವಿಷ್ಣುಮೂರ್ತಿ ದೇವಸ್ಥಾನದ ಸಭಾಂಗಣದಲ್ಲಿ ಜರುಗಲಿದೆ.
ಬೆಳಗ್ಗೆ 8.30ರಿಂದ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸಂಕೀರ್ತನೆ, 10ಕ್ಕೆ ಸಾಂಸ್ಕ್ರತಿಕ ಮೆರವಣಿಗೆ ನಡೆಯುವುದು. 10.30ಕ್ಕೆ ನಡೆಯುವ ಸಮಾರಂಭದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕøತ ಅಮೈ ಮಹಾಲಿಂಗ ನಾಯ್ಕ ಉದ್ಘಾಟಿಸುವರು. ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ. ಸಿ.ಸೋಮಶೇಖರ್ ಅಧ್ಯಕ್ಷತೆ ವಹಿಸುವರು. ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರ್ ಚಂದ್, ಎಣ್ಮಕಜೆ ಗ್ರಾಪಂ ಅಧ್ಯಕ್ಷ ಜೆ.ಎಸ್ ಸೋಮಶೇಖರ್, ಸದಸ್ಯೆ ಇಂದಿರಾ ನಾಯ್ಕ್, ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ರವೀಶ್ ತಂತ್ರಿ ಕುಂಟಾರು, ಉಕ್ಕಿನಡ್ಕ ಇಗರ್ಜಿ ಧರ್ಮಗುರು ಫಾದರ್ ವಿಲ್ಸನ್ ಲೋಬೋ ಗೌರವ ಅತಿಥಿಗಳಾಗಿ ಭಾಗವಹಿಸುವರು. ಮಧ್ಯಾಹ್ನ 12ರಿಂದ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕøತಿಕ ಕಾರ್ಯಕ್ರಮ, ಕವಿ ಸಮ್ಮಿಲನ, ವಿಚಾರ ಸಂಕಿರಣ ನಡೆಯುವುದು. ನಿವೃತ್ತ ಮುಖ್ಯ ಶಿಕ್ಷಕ ಶಂಕರ್ ಸಾರಡ್ಕ ವಿಚಾರ ಸಂಕಿರಣ ಅಧ್ಯಕ್ಷತೆ ವಹಿಸುವರು. ವಿವಿಧ ವಿಷಯಗಳ ಕುರಿತು ನಾಲಂದ ಕಾಲೇಜು ಪ್ರಾಂಶುಪಾಲ ಡಾ. ಕಿಶೋರ್ ಕುಮಾರ್ ರೈ ಶೇಣಿ, ಸಿಬಿಐ ಬೆಂಗಳೂರಿನ ಪಬ್ಲಿಕ್ ಪ್ರೋಸಿಕ್ಯೂಟರ್ ಶಿವಾನಂದ ಪೆರ್ಲ, ರಾಜಾ ರಾಂ ಎಸ್. ಪೆರ್ಲ, ಶಿಕ್ಷಕ ಅಶ್ರಫ್ ಮತ್ರ್ಯ ವಿಷಯ ಮಂಡಿಸುವರು.
ಈ ಸಂದರ್ಭ ಏಕವ್ಯಕ್ತಿ ನಾಟಕ, ಯಕ್ಷಗಾನ ಬಯಲಾಟ ನಡೆಯುವುದು. ಸಂಜೆ 5ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಡಾ. ಸಿ.ಸೋಮಶೇಖರ್ ಅಧ್ಯಕ್ಷತೆ ವಹಿಸುವರು.ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅತಿಥಿಯಾಗಿ ಭಾಗವಹಿಸುವರು. ಗಡಿ ಪ್ರದೇಶದ ಸಾಧಕರಿಗೆ ಸನ್ಮಾನ, ಹಿರಿಯರಿಗೆ ಗೌರವಾರ್ಪಣೆ, ನೃತ್ಯ ವೈವಿಧ್ಯ ನಡೆಯಲಿದೆ.