ವಯನಾಡು: ಕಲ್ಪೆಟ್ಟಾದಲ್ಲಿ ಯುಡಿಎಫ್ ಪ್ರತಿಭಟನೆಗೆ ಸಂಬಂಧಿಸಿದಂತೆ ವಾಹನ ಸಂಚಾರಕ್ಕೆ ಅಡ್ಡಿಪಡಿಸಿ ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಕಾಂಗ್ರೆಸ್ ಕೆಪಿಸಿಸಿ ಕಾರ್ಯಾಧ್ಯಕ್ಷ ಟಿ ಸಿದ್ದಿಕ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಟಿ ಸಿದ್ದಿಕ್ ಅಲ್ಲದೆ 50 ಕಾರ್ಯಕರ್ತರ ವಿರುದ್ಧವೂ ಪ್ರಕರಣ ದಾಖಲಾಗಿದೆ.
ಇದೇ ವೇಳೆ ತಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದರೆ ಹಲ್ಲು ಮತ್ತು ಉಗುರು ಕಿತ್ತೆಯುವ ಮೂಲಕ ಪ್ರತೀಕಾರ ತೀರಿಸುವುದಾಗಿ ಹೇಳಿರುವ ಸಿದ್ದಿಕ್, ಕಾರ್ಯಕರ್ತರನ್ನು ಪಕ್ಷ ನೋಡಿಕೊಳ್ಳುತ್ತದೆ ಎಂದರು.