ಮಧೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಸರಗೋಡು ವಲಯದ ಕೂಡ್ಲು, ಉಳಿಯತ್ತಡ್ಕ, ಮಧೂರು ಒಕ್ಕೂಟಗಳ ಪದಗ್ರಹಣ ಸಮಾರಂಭ ಉಳಿಯತ್ತಡ್ಕದ ಪರಕ್ಕಿಲ ಗಟ್ಟಿ ಸಮುದಾಯ ಭವನದಲ್ಲಿ ಜರುಗಿತು. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತೀ ವಿ.ಹೆಗ್ಗಡೆ ಅವರ ಶುಭಾಶೀರ್ವಾದಗಳೊಂದಿಗೆ ಕಾರ್ಯಕ್ರಮ ಜರುಗಿತು.
ನಿವೃತ್ತ ಐಎಎಸ್ ಅಧಿಕಾರಿ ಕೆ. ಶಶಿಧರ ಸಮಾರಂಭ ಉದ್ಘಾಟಿಸಿದರು. ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಅವರ ದೀಪ ಬೆಳಗಿಸಿ, ತೆಂಗಿನಗರಿ ಅರಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೂಡ್ಲು ಒಕ್ಕೂಟ ಅಧ್ಯಕ್ಷೆ ವಿಶಾಲಾಕ್ಷಿ ಅಧ್ಯಕ್ಷತೆ ವಹಿಸಿದ್ದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದ.ಕ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಯೋಜನೆ ಕಾರ್ಯಚಟುವಟಿಕೆ, ಯೋಜನೆ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿದರು. ಮಧೂರು ಗ್ರಾಪಂ ಅಧ್ಯಕ್ಷ ಗೋಪಾಲಕೃಷ್ಣ ಕೆ, ಗಟ್ಟಿ ಸಮಾಜದ ಅಧ್ಯಕ್ಷ ಮುರಳಿ ಗಟ್ಟಿ, ಮಲಬಾರ್ ದೇವಸ್ವಂ ಬೋರ್ಡ್ ಸದಸ್ಯ ವೆಂಕಟ್ರಮಣ ಹೊಳ್ಳ, ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ, ಮಧೂರು ಗ್ರಾಪಂ ಸದಸ್ಯ ಬಶೀರ್ ಉಪಸ್ಥಿತರಿದ್ದರು.
ಕಾಸರಗೋಡು ಜಿಲ್ಲಾ ಕಾರ್ಯನಿರ್ವಹಣಾಧಿಕಾರಿ ಮುಕೇಶ್ ಗಟ್ಟಿ ಸವಾಗತಿಸಿದರು. ಮೇಘರಾಜ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಕಾಸರಗೋಡು ವಲಯ ಮೇಲ್ವಿಚಾರಕಿ ಪುಷ್ಪಲತಾ ವಂದಿಸಿದರು. ಕಾರ್ಯಕ್ರಮದ ಅಂಗವಾಗಿ ಕುಣಿತ ಭಜನೆ ಹಾಗೂ ಸಾಂಸ್ಕøತಿಕ ವೈವಿಧ್ಯ ಪ್ರದರ್ಶನಗೊಂಡಿತು.