ತಿರುವನಂತಪುರ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸ್ವಲ್ಪ ಸಮಯದ ನಂತರ ಇದೀಗ ಮತ್ತೆ ಏರಿಕೆಯಾಗಿದೆ. ನಿನ್ನೆ 1,370 ಮಂದಿಗೆ ಸೋಂಕು ಪತ್ತೆಯಾಗಿದೆ. ನಾಲ್ಕು ಸಾವುಗಳು ವರದಿಯಾಗಿವೆ.
ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೈನಂದಿನ ಧನಾತ್ಮಕ ಪ್ರಮಾಣ(ಟಿಪಿಆರ್) ಶೇ.8.77 ಆಗಿದೆ. ಎರ್ನಾಕುಳಂ ಜಿಲ್ಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ವರದಿಯಾಗಿದೆ. ಎರ್ನಾಕುಳಂನಲ್ಲಿ 463 ವರದಿಯಾಗಿದೆ. ಮಂಗಳವಾರವೂ ರೋಗಿಗಳ ಸಂಖ್ಯೆ ಸಾವಿರ ದಾಟಿತ್ತು. ಮಂಗಳವಾರ, 1,161 ಜನರಿಗೆ ರೋಗ ಪತ್ತೆಯಾಗಿತ್ತು.
ಸೋಂಕು ಕಡಿಮೆಯಾದ ಕಾರಣ ಎರಡು ವರ್ಷಗಳ ನಂತರ ರಾಜ್ಯದಲ್ಲಿ ಶಾಲೆಗಳು ಸಹಜ ಸ್ಥಿತಿಗೆ ಮರಳಿವೆ. ಕಳೆದ ಕೆಲವು ವಾರಗಳಿಂದ ಇಳಿಮುಖವಾಗಿದ್ದ ಕೊರೊನಾ ಪ್ರಮಾಣ ಮತ್ತೆ ಏರಿಕೆಯಾಗುತ್ತಿದ್ದು, ಜನರು ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.