ರಾಯಪುರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಮುಸ್ಲಿಮೇತರರ ಹತ್ಯೆ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಛತ್ತೀಸಗಡ ಮುಖ್ಯಮಂತ್ರಿ ಭೂಪೇಶ್ ಬಾಘೆಲ್, ಬಿಜೆಪಿ ಮತ್ತು ಆರ್‌ಎಸ್‌ಎಸ್ ಈ ಬಗ್ಗೆ ಏಕೆ ಮೌನ ವಹಿಸಿವೆ ಎಂದು ಪ್ರಶ್ನಿಸಿದ್ದಾರೆ.

ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 370ನೇ ವಿಧಿ ರದ್ಧತಿಯಿಂದ ಜಮ್ಮು, ಕಾಶ್ಮೀರದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಬರಲಿದೆ ಎಂದು ಬಿಜೆಪಿ ನಾಯಕರು ಹೇಳಿದ್ದರು. ಆದರೆ, ಪರಿಸ್ಥಿತಿ ಇದಕ್ಕೆ ವಿರುದ್ಧವಾಗಿದೆ. ಈಗ 'ದಿ ಕಾಶ್ಮೀರ್ ಫೈಲ್ಸ್' ಚಿತ್ರ ವೀಕ್ಷಿಸುವ ಸಮಯ ಬಂದಿದೆ. ಹಿಂದೂಗಳ ಹತ್ಯೆಯಾದರೂ ಬಿಜೆಪಿ, ಆರ್‌ಎಸ್‌ಎಸ್ ಮೌನವಾಗಿದೆ. ಕಾಶ್ಮೀರದಲ್ಲಿ ಬಿಜೆಪಿ ಕಾರ್ಯತಂತ್ರ ವಿಫಲವಾಗಿದೆ. ಸರ್ಕಾರಿ ನೌಕರರನ್ನು ರಕ್ಷಿಸಲು ಸಾಧ್ಯವಾಗದಿದ್ದಲ್ಲಿ ಜನಸಾಮಾನ್ಯರ ಪಾಡೇನು? ಕಾಶ್ಮೀರದ ಪಂಡಿತರು ಮತ್ತು ಹಿಂದೂಗಳ ಹತ್ಯೆಗಳಿಗೆ ಯಾರು ಜವಾಬ್ದಾರರು? ಅವರನ್ನು ರಕ್ಷಿಸಲು ಅಲ್ಲಿನ ಸರ್ಕಾರ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದರು.