ನವದೆಹಲಿ: ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಒಮ್ಮತದ ಅಭ್ಯರ್ಥಿಯ ಆಯ್ಕೆ ನಿಟ್ಟಿನಲ್ಲಿ ವಿರೋಧ ಪಕ್ಷಗಳು ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಜೊತೆ ಸಮಾಲೋಚನೆಗಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಬಿಜೆಪಿ ನಿಯುಕ್ತಿಗೊಳಿಸಿದೆ.

ಈ ಕುರಿತು ಭಾನುವಾರ ಹೇಳಿಕೆ ನೀಡಿದ ಬಿಜೆಪಿ, ಆಡಳಿತಾರೂಢ ಮೈತ್ರಿಕೂಟ ಎನ್‌ಡಿಎ ಮತ್ತು ವಿರೋಧ ಪಕ್ಷಗಳ ಮೈತ್ರಿಕೂಟ ಯುಪಿಎ ಪಕ್ಷಗಳ ಜೊತೆ ಮಾತುಕತೆಗಾಗಿ ಇಬ್ಬರು ಹಿರಿಯ ನಾಯಕರನ್ನು ನಿಯೋಜಿಸಲಾಗಿದ್ದು, ಅವರು ವಿವಿಧ ಪಕ್ಷಗಳ ಜೊತೆ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಿದೆ.
2017ರ ರಾಷ್ಟ್ರಪತಿ ಚುನಾವಣೆ ವೇಳೆ ರಾಮನಾಥ್ ಕೋವಿಂದ್ ಅವರ ಹೆಸರನ್ನು ಅಂತಿಮಗೊಳಿಸಿದ ಬಿಜೆಪಿ, ಕೊನೆ ಗಳಿಗೆಯಲ್ಲಿ ಒಮ್ಮತದ ಅಭ್ಯರ್ಥಿ ಕುರಿತು ಬಿಜೆಪಿ ಸಮಾಲೋಚನೆಗೆ ಬಂದಿತ್ತು ಎಂದು ವಿರೋಧ ಪಕ್ಷಗಳು ಆರೋಪಿಸಿದ್ದವು. ಈ ಹಿನ್ನೆಲೆಯಲ್ಲಿ ಮೀರಾ ಕುಮಾರ್ ಅವರು ವಿರೋಧ ಪಕ್ಷಗಳ ಬೆಂಬಲದೊಂದಿಗೆ ಸ್ಪರ್ಧಿಸಿದ್ದರು. ಆದರೆ, ರಾಮನಾಥ್ ಕೋವಿಂದ್ ಅವರ ಎದುರು ಪರಾಜಿತಗೊಂಡಿದ್ದರು.