ಉಪ್ಪಳ: ಕೊಂಡೆವೂರಿನ ಶ್ರೀ ನಿತ್ಯಾನಂದ ಯೋಗಾಶ್ರಮÀದಲ್ಲಿ ಜೂ..12 ರಂದು ಭಾನುವಾರ ಬೆಳಗ್ಗಿನಿಂದ ಸಂಜೆವರೆಗೆ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಆಶ್ರಯದಲ್ಲಿ "ಗಡಿನಾಡ ಸಾಂಸ್ಕøತಿಕ ಉತ್ಸವ"ವನ್ನು ಆಯೋಜಿಸಿದೆ. ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ, ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದ ಉದ್ಘಾಟನೆಯನ್ನು ಮಂಗಳೂರಿನ ಸಹಾಯಕ ಆಯುಕ್ತ ಮದನ್ ಮೋಹನ್ ರವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರು ವಿ.ವಿ.ಯ ಉಪಕುಲಪತಿ ಡಾ. ಸುಬ್ರಹ್ಮಣ್ಯ ಯಡಪಡಿತ್ತಾಯ, ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತೀಹಳ್ಳಿ, ಕೊಂಡೆವೂರು ಮಠದ ವಿಶ್ವಸ್ಥ ಮೋನಪ್ಪ ಭಂಡಾರಿ, ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಕೇಂದ್ರಸಮಿತಿಯ ಅಧ್ಯಕ್ಷ ಶ್ರೀನಿವಾಸ ರಾವ್ ಪಿ.ಬಿ. ಮತ್ತು ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಕಾಸರಗೋಡು ಜಿಲ್ಲಾ ಅಧ್ಯಕ್ಷ ಎ.ಆರ್. ಸುಬ್ಬಯ್ಯಕಟ್ಟೆ ಇವರುಗಳು ಉಪಸ್ಥಿತರಿರುವರು. ಸಾಮಾಜಿಕ ಕಾರ್ಯಕರ್ತ ಮೀನಾರು ವಿಶ್ವನಾಥ ಆಳ್ವ ಮತ್ತು ಕವಿ,ಹಿರಿಯ ಪತ್ರಕರ್ತ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಸಂಜೆ ಪೂಜ್ಯರ ದಿವ್ಯ ಉಪಸ್ಥಿತಿಯಲ್ಲಿ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ನಗರ ಪೋಲೀಸ್ ಆಯುಕ್ತ ಎನ್. ಶಶಿಕುಮಾರ್ ವಹಿಸಲಿದ್ದು, ಅತಿಥಿಗಳಾಗಿ ಹಿರಿಯ ಪತ್ರಕರ್ತ ಮಲಾರ್ ಜಯರಾಮ ರೈ, ಕರ್ನಾಟಕ ಸಮಿತಿ ಕಾಸರಗೋಡಿನ ಅಧ್ಯಕ್ಷ ನ್ಯಾಯವಾದಿ. ಮುರಳೀಧರ ಬಳ್ಳೂಕುರಾಯ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಸರಗೋಡು ಯೋಜನಾಧಿಕಾರಿ ಮುಕೇಶ್ ಮತ್ತು ಕೊಂಡೆವೂರು ಮಠದ ವಿಶ್ವಸ್ಥ ಶಶಿಧರ ಶೆಟ್ಟಿ ಗ್ರಾಮಚಾವಡಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಮಂಗಲ್ಪಾಡಿಯ ಯಕ್ಷಗಾನ ಗುರುಗಳಾದ ರಾಮ ಸಾಲ್ಯಾನ್ ಹಾಗೂ ಬಳ್ಳಪದವಿನ ಗಾನಪ್ರವೀಣ ವಿದ್ವಾನ್. ಯೋಗೀಶ್ ಶರ್ಮ ರಿಗೆ ಸನ್ಮಾನ ನಡೆಯಲಿದೆ.
ಉತ್ಸವದಲ್ಲಿ ಶಿವಮೊಗ್ಗ ಜಿಲ್ಲೆ, ಹೊಸನಗರ ತಾ. ನ ಮಾದಾಪುರದ ಶ್ರೀ ಬಸವೇಶ್ವರ ರೈತ ಯುವಕ ಸಂಘದ ಲೋಹಿತ್ ಕುಮಾರ್ ಮತ್ತು ತಂಡದವರಿಂದ ಡೊಳ್ಳು ಕುಣಿತ, ಮುಳ್ಳೇರಿಯದ ಬಿಂದುಶ್ರೀಧರ್ ಮತ್ತು ಬಳಗದಿಂದ ತಿರುವಾದಿರ, ಹರಿದಾಸ್ ಜಯಾನಂದ ಹೊಸದುರ್ಗರಿಂದ ದಾಸ ಸಂಕೀರ್ತನೆ, ಕೊಂಡೆವೂರಿನ ಸವಿಜೀವನಂ ನೃತ್ಯ ಕಲಾಕ್ಷೇತ್ರದಿಂದ ಭರತನಾಟ್ಯ ಮತ್ತು ಯುವಪ್ರತಿಭೆಗಳಿಂದ ಯಕ್ಷಗಾನ ಸುಧನ್ವಾರ್ಜುನ ಕಾಳಗ ಮುಂತಾದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ.